ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಪ್ರಯಾಣಿಕರ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು. ಅಪಘಾತಕ್ಕೀಡಾದ ಬಸ್ ವಿದರ್ಭ ಟ್ರಾವೆಲ್ಸ್ಗೆ ಸೇರಿದ್ದಾಗಿದ್ದು, ಬಸ್ನಲ್ಲಿ ನಾಗ್ಪುರ, ವಾರ್ಧಾ ಮತ್ತು ಯವತ್ಮಾಲ್ನಿಂದ ಪ್ರಯಾಣಿಕರು ಪ್ರಯಾಣಿಸು ತ್ತಿದ್ದರು ಎಂದು ವರದಿಗಳು ತಿಳಿಸಿವೆ. ಸಿಂಧಖೇಡರಾಜ ಸಮೀಪದ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ಈ ವೇಳೆ ಬಸ್’ಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ನಂತರ ಕೇವಲ ಎಂಟು ಮಂದಿ ಪ್ರಯಾಣಿಕರು ಮಾತ್ರ ಸುರಕ್ಷಿತ ವಾಗಿ ಹೊರಬರಲು ಸಾಧ್ಯವಾಗಿದೆ. 25 ಪ್ರಯಾ ಣಿಕರು ಸಜೀವ ದಹನವಾಗಿದ್ದಾರೆ. ಬಸ್ಸಿನಿಂದ 25 ಮೃತದೇಹಗಳನ್ನು ಹೊರ ತೆಗೆದು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಬಸ್ಸಿನಲ್ಲಿ ಒಟ್ಟು 33 ಜನರು ಪ್ರಯಾಣಿಸು ತ್ತಿದ್ದರು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಬುಲ್ಧಾನ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸ ಲಾಗಿದೆ.
ಬಸ್ ಮೊದಲು ಕಬ್ಬಿಣದ ಕಂಬಕ್ಕೆ ಡಿಕ್ಕಿ ಹೊಡೆದು ನಂತರ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಪಲ್ಟಿಯಾ ಗಿದೆ.
ಬಳಿಕ ಬದುಕುಳಿದ ಪ್ರಯಾಣಿಕರು ಬಸ್ಸಿನ ಬಾಗಿಲು ಒದ್ದು ಮತ್ತು ಗಾಜುಗಳನ್ನು ಒಡೆದು ಹೊರಬಂದಿದ್ದಾರೆಂದು ತಿಳಿದು ಬಂದಿದೆ. ಅಪಘಾತದ ನಂತರ ಬಸ್ಸಿನಿಂದ ಹೆಚ್ಚಿನ ಪ್ರಮಾಣದ ಡೀಸೆಲ್ ರಸ್ತೆಯ ಮೇಲೆ ಸೋರಿಕೆಯಾಗಿದೆ. ಈ ವೇಳೆ ಬಸ್ನ ಇಂಜಿನ್ನಲ್ಲಿ ಸ್ಪಾರ್ಕ್ ಆಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.