Sunday, 15th December 2024

ಬಸ್‌ಗೆ ಬೆಂಕಿ: 9 ಜನರು ಸಜೀವ ದಹನ

ನೂಹ್‌: ಹರಿಯಾಣದ ನೂಹ್ ಜಿಲ್ಲೆಯ ತೌರು ಬಳಿ ತಡರಾತ್ರಿ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 9 ಜನರು ಸಜೀವ ದಹನಗೊಂಡಿದ್ದಾರೆ ಮತ್ತು 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಕುಂಡ್ಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ವೇಯಲ್ಲಿ ತಡರಾತ್ರಿ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬಸ್‌ನಲ್ಲಿ ಸುಮಾರು 60 ಮಂದಿ ಪ್ರಯಾಣಿಸು ತ್ತಿದ್ದರು. ಎಲ್ಲರೂ ಪಂಜಾಬ್ ಮತ್ತು ಚಂಡೀಗಢ ನಿವಾಸಿಗಳಾಗಿದ್ದು, ಮಥುರಾದಿಂದ ಹಿಂತಿರುಗುತ್ತಿದ್ದರು ಎಂದು ಹೇಳಿದರು.

ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಬಸ್ಸನ್ನು ಹಿಂಬಾಲಿಸಿ ಚಾಲಕನಿಗೆ ನಿಲ್ಲಿಸುವಂತೆ ಹೇಳಿದ್ದಾರೆ. ಪೊಲೀಸರು ಹಾಗೂ ಅಗ್ನಿಶಾಮಕ ದಳಕ್ಕೂ ಮಾಹಿತಿ ನೀಡಿದ್ದಾರೆ ಎಂದು ಹೇಳಿದರು. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.