Wednesday, 30th October 2024

ಬಿ.ವೈ.ವಿಜಯೇಂದ್ರರ ದಿಢೀರ್‌ ದೆಹಲಿ ಭೇಟಿ ?

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹಾಗೂ ಸಚಿವ ಸಿ.ಪಿ.ಯೋಗೇಶ್ವರ್ ಅವರ ದೆಹಲಿ ಭೇಟಿ ಬೆನ್ನಲ್ಲೇ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದಿಢೀರ್ ಆಗಿ ದೆಹಲಿಗೆ ಪ್ರಯಾಣ ಬೆಳೆಸಿದರು.

ಸಿ.ಪಿ.ಯೋಗೇಶ್ವರ್ ದೆಹಲಿ ಭೇಟಿ ಬೆನ್ನಲ್ಲೇ ತಮ್ಮ ಇಲಾಖೆಯಲ್ಲಿ ವಿಜಯೇಂದ್ರ ಹಸ್ತಕ್ಷೇಪದ ಬಗ್ಗೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು. ಈ ಬೆಳವಣಿಗೆಗಳ ನಡುವೆಯೇ ಸಿ.ಪಿ.ಯೋಗೇಶ್ವರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಹಲವು ಶಾಸಕರು ಸಹಿ ಸಂಗ್ರಹವನ್ನೂ ನಡೆಸಿದ್ದರು. ರಾಜಕೀಯ ಬೆಳವಣಿಗಳ ಮಧ್ಯೆ ಇದೀಗ ಬಿ.ವೈ.ವಿಜಯೇಂದ್ರ ದೆಹಲಿಗೆ ತೆರಳಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿಗಾಗಿ ಸಮಯ ಕೇಳಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಇದು ರಾಜಕೀಯ ಭೇಟಿಯಲ್ಲ. ಬೇರೆ ಕಾರಣಗಳಿಗಾಗಿ ಬಂದಿದ್ದೇನೆ ಎಂದು ತಿಳಿಸಿದ್ದಾರೆ.