ಒಡಿಶಾದ ಬ್ರಜರಾಜನಗರ, ಕೇರಳದ ತ್ರಿಕ್ಕಾಕರ ಮತ್ತು ಉತ್ತರಾಖಂಡದ ಚಂಪಾವತ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ವೇಳಾಪಟ್ಟಿ ಬಿಡುಗಡೆ ಯಾಗಿದೆ. ಇದೇ ತಿಂಗಳ 4ರಂದು ಆಯೋಗ ಅಧಿಸೂಚನೆ ಹೊರ ಡಿಸಲಿದೆ.
ನಾಮಪತ್ರ ಸಲ್ಲಿಸಲು ಮೇ 11 ಮತ್ತು 12 ಕೊನೆಯ ದಿನವಾಗಿದ್ದು, ನಾಮಪತ್ರ ಹಿಂಪಡೆಯಲು ಮೇ 16 ಕೊನೆಯ ದಿನವಾಗಿದ್ದು, ಮೇ 31 ಮಂಗಳವಾರ ಮತದಾನ ನಡೆಯಲಿದ್ದು, ಜೂನ್ 3 ರಂದು ಮತ ಎಣಿಕೆ ನಡೆಯಲಿದೆ.
ಮೂರು ರಾಜ್ಯಗಳ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಈ ವರ್ಷದ ಜನವರಿವರೆಗೆ ಪ್ರಕಟಿಸಲಾದ ಮತದಾರರ ಪಟ್ಟಿಯನ್ನು ಪರಿಗಣಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ. ಇವಿಎಂಗಳ ಮೂಲಕವೇ ಉಪಚುನಾವಣೆ ನಡೆಸುವುದಾಗಿಯೂ ಹೇಳಿದೆ.
ಸಿಎಂ ಪುಷ್ಕರ್ ಸಿಂಗ್ ಧಾಮಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಚಂಪಾವತ್ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಬಿಜೆಪಿ ಶಾಸಕ ಕೈಲಾಶ್ ಚಂದ್ರ ಗಹತೋಡಿ ರಾಜೀನಾಮೆ ನೀಡಿದ ನಂತರ ವಿಧಾನಸಭಾ ಸ್ಥಾನ ತೆರವಾಗಿತ್ತು.
ಇತ್ತೀಚೆಗಷ್ಟೇ ನಡೆದ ಚುನಾವಣೆಯಲ್ಲಿ ಸಿಎಂ ಪುಷ್ಕರ್ ಸಿಂಗ್ ಧಾಮಿ ಸೋಲನುಭವಿಸಿದರೂ ಪಕ್ಷ ಮತ್ತೆ ಅಧಿಕಾರಕ್ಕೆ ಬಂದಿದೆ.