ನವದೆಹಲಿ: ಏಳು ರಾಜ್ಯಗಳ 13 ವಿಧಾನಸಭಾ ಸ್ಥಾನಗಳ ಉಪಚುನಾವಣೆ ರಿಸಲ್ಟ್ ಶನಿವಾರ ಪ್ರಕಟವಾಗಲಿದೆ.
ಮಧ್ಯಪ್ರದೇಶ, ತಮಿಳುನಾಡು, ಪಂಜಾಬ್, ಪಶ್ಚಿಮ ಬಂಗಾಳ, ಬಿಹಾರ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಕ್ಷೇತ್ರಗಳು ಸೇರಿದಂತೆ ಒಟ್ಟು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ.
ಈ ಪೈಕಿ 11 ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದು, ಆಮ್ ಆದ್ಮಿ ಪಕ್ಷದ ಮೊಹಿಂದರ್ ಭಗತ್ ಜಲಂಧರ್ ಪಂಜಾಬ್ನ ಪಶ್ಚಿಮ ದಲ್ಲಿ ಗೆಲುವು ಸಾಧಿಸಿದ್ದಾರೆ. 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗೆ ವೋಟಿಂಗ್ ನಡೆದಿತ್ತು.
ಶನಿವಾರ ಮತ ಎಣಿಕೆ ನಡೆಯುತ್ತಿದ್ದು, ಸದ್ಯದ ಮಟ್ಟಿಗೆ ಇಂಡಿಯಾ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. ಲೋಕಸಭಾ ಚುನಾವಣೆಯ ನಂತರ ಮೊದಲ ಬಾರಿಗೆ ಈ ವಿಧಾನಸಭೆ ಬೈಎಲೆಕ್ಷನ್ ನಡೆದಿದೆ.