ನವದೆಹಲಿ: ಕಾರ್ಯಕರ್ತ ಅಖಿಲ್ ಗೊಗೊಯಿಗೆ ಜಾಮೀನು ಅನ್ನು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ. ಅಸ್ಸಾಂನ ಸಿಎಎ ವಿರೋಧಿ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದ ಆರೋಪದಡಿ ಬಂಧನಕ್ಕೊಳಗಾಗಿದ್ದಾರೆ
ನ್ಯಾಯಮೂರ್ತಿಗಳಾದ ಎನ್.ವಿ ರಮಣ, ಸೂರ್ಯ ಕಾಂತ್ ಮತ್ತು ಅನಿರುದ್ಧ್ ಬೋಸ್ ಅವರನ್ನೊಳಗೊಂಡ ಪೀಠವು ಅನಿಲ್ ಗೊಗೊಯಿ ಅವರ ಜಾಮೀನು ಅರ್ಜಿ ತಿರಸ್ಕರಿಸಿದ್ದು, ‘ಈ ಹಂತದಲ್ಲಿ ಜಾಮೀನು ಅರ್ಜಿ ಪರಿಗಣಿಸಲು ಸಾಧ್ಯವಿಲ್ಲ’ ಎಂದು ಹೇಳಿದೆ.
ವಿಚಾರಣೆ ಆರಂಭಗೊಂಡ ಬಳಿಕ ಅರ್ಜಿದಾರ ಮತ್ತೊಮ್ಮೆ ಸುಪ್ರೀಂಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಬಹುದು ಎಂದು ಪೀಠವು ಅಖಿಲ್ ಪರ ವಕೀಲ ರುನಮೋನಿ ಭುಯಾನ್ ಅವರಿಗೆ ತಿಳಿಸಿದೆ.
ಜ.7ರಂದು ಅಖಿಲ್ ಗೊಗೊಯಿ ಅವರು ಜಾಮೀನು ನೀಡಬೇಕು ಎಂದು ಕೋರಿ ಗುವಾಹಟಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯವು ಅರ್ಜಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.