Wednesday, 11th December 2024

ಸಚಿವ ಸಂಪುಟದಿಂದ ಬಜೆಟ್ ಮಂಡನೆಗೆ ಅನುಮೋದನೆ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ ನಲ್ಲಿ ಸೋಮವಾರ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಮಂಡನೆಗೂ ಪೂರ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆ ನೀಡಲಾಗಿದೆ.

11 ಗಂಟೆಗೆ ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೋರ್, ಇದು ಜನರ ನಿರೀಕ್ಷೆಯ ಬಜೆಟ್ ಆಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತ ಪಡಿಸಿದರು.

ಮೊದಲ ಬಾರಿಗೆ ಕಾಗದ ರಹಿತ ಬಜೆಟ್ ಸಂಸತ್ ನಲ್ಲಿ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ.