ನವದೆಹಲಿ: ರೈಲ್ವೆ ಇಲಾಖೆಯು ಹಳೆಯ ಪದ್ಧತಿಯನ್ನೇ ಮುಂದುವರಿಸಲು ತೀರ್ಮಾನಿಸಿದೆ. ಇದರಂತೆ, ರೈಲು ಪ್ರಯಾಣಿಕರು ಇನ್ನು ಮುಂದೆ ರೈಲು ಹೊರಡಲು ಕೇವಲ ಐದು ನಿಮಿಷ ಇರುವಾಗಲೂ ಟಿಕೆಟ್ ಕಾಯ್ದಿರಿಸಬಹು ದಾಗಿದೆ. ಇದು ಇದೇ ತಿಂಗಳ 10ರಿಂದಲೇ ಜಾರಿಯಾಗಲಿದೆ.
‘ಈ ಹಿಂದೆ ಇದ್ದಂತೆಯೇ ರೈಲು ಹೊರಡಲು 30ರಿಂದ 5 ನಿಮಿಷ ಮುಂಚಿತ ವಾಗಿ ಪ್ರಯಾಣಿಕರ ಎರಡನೇ ಮೀಸಲು ಪಟ್ಟಿ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ’ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ವಿಶೇಷ ರೈಲುಗಳ ಸಂಚಾರ ಆರಂಭಿಸಿದಾಗ ರೈಲು ಹೊರಡಲು ಎರಡು ಗಂಟೆ ಇದ್ದಂತೆ ಪ್ರಯಾಣಿ ಕರ ಎರಡನೇ ಮೀಸಲು ಪಟ್ಟಿ ಬಿಡುಗಡೆ ಮಾಡಲಾಗುತ್ತಿತ್ತು.
‘ರೈಲು ಹೊರಡಲು ಕನಿಷ್ಠ ನಾಲ್ಕು ಗಂಟೆ ಮುಂಚಿತವಾಗಿ ಮೊದಲ ಪಟ್ಟಿ ತಯಾರಿಸಲಾಗು ತ್ತದೆ. ಟಿಕೆಟ್ ರದ್ದತಿಯಿಂದಾಗಿ ಆಸನಗಳು ಖಾಲಿ ಇದ್ದರೆ ಎರಡನೇ ಪಟ್ಟಿ ಸಿದ್ಧಪಡಿಸುವವರೆಗೂ ಬುಕಿಂಗ್ ಕೌಂಟರ್‌ಗಳಲ್ಲಿ ಅಥವಾ ಆನ್‌ಲೈನ್ ಮೂಲಕ ಟಿಕೆಟ್ ಕಾಯ್ದಿರಿಸಬಹುದು’ ಎಂದು ಪ್ರಕಟಣೆ ತಿಳಿಸಿದೆ.