ನವದೆಹಲಿ: ಸಿಖ್ ಪ್ರತ್ಯೇಕತಾವಾದಿ ನಾಯಕ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಆರೋಪಿಸಿ ಭಾರತೀಯ ರಾಜತಾಂತ್ರಿಕ ಅಧಿಕಾರಿಯನ್ನು ಹೊರ ಹಾಕಿದ ಕೆಲವೇ ಗಂಟೆಗಳ ನಂತರ ಕೆನಡಾಗೆ ಭಾರತ ತಿರುಗೇಟು ನೀಡಿದೆ.
ಏಟಿಗೆ ಏದಿರೇಟು ಎಂಬಂತೆ ಭಾರತ ಸರ್ಕಾರ ಕೆನಡಾದ ಉನ್ನತ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟಿಸಿದೆ.
ಭಾರತದಲ್ಲಿರುವ ಕೆನಡಾದ ಹೈಕಮಿಷನರ್ ಅವರನ್ನು ಕರೆಸಿ, ಕೆನಡಾದ ಹಿರಿಯ ರಾಜತಾಂತ್ರಿಕರನ್ನು ಹೊರಹಾಕುವ ಭಾರತ ಸರ್ಕಾರದ ನಿರ್ಧಾರದ ಬಗ್ಗೆ ತಿಳಿಸಲಾಯಿತು. ಮುಂದಿನ ಐದು ದಿನದೊಳಗೆ ಭಾರತವನ್ನು ತೊರೆಯುವಂತೆ ಸಂಬಂಧಪಟ್ಟ ರಾಜತಾಂತ್ರಿಕರಿಗೆ ತಿಳಿಸಲಾಗಿದೆ ಎಂದು ವರದಿಯಾಗಿದೆ.
ಸೋಮವಾರ ಮಧ್ಯಾಹ್ನ ನಡೆದ ಸಂಸತ್ ಅಧಿವೇಶನದಲ್ಲಿ ಮಾತನಾಡಿದ್ದ ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ, ‘ಖಾಲಿಸ್ತಾನಿ ಭಯೋತ್ಪಾದಕ ಹತ್ಯೆಯ ಹಿಂದೆ ಭಾರತೀಯ ಏಜೆಂಟರುಗಳ ಕೈವಾಡವಿದೆ ಎಂಬುವುದಕ್ಕೆ ನಮ್ಮ ಸರ್ಕಾರದ ಬಳಿ ಸಾಕ್ಷಿಗಳಿವೆ’ ಎಂದು ಹೇಳಿದ್ದರು.
ಜಸ್ಟಿನ್ ಟ್ರಡೋ ಹೇಳಿಕೆ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ್ದ ಕೆನಡಾದ ವಿದೇಶಾಂಗ ಸಚಿವೆ ಮೆಲಾನಿ ಜೋಲಿ, ‘ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಸರ್ಕಾರ ಕಠಿಣ ನಿಲುವು ತಾಳಿದೆ.