ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ಮುಂಚೂಣಿಯಲ್ಲಿರುವ ರಾಜಸ್ಥಾನ ಮುಖ್ಯ ಮಂತ್ರಿ ಅಶೋಕ್ ಗೆಹ್ಲೋಟ್ ಅವರು ಮಂಗಳವಾರ ರಾತ್ರಿ ತಮ್ಮ ಶಾಸಕರನ್ನು ಭೇಟಿ ಯಾಗಿ ತಾನು ರಾಷ್ಟ್ರೀಯ ರಾಜಕಾರಣಕ್ಕೆ ಹೋದರೂ ನಿಮ್ಮಿಂದ “ದೂರ ವಿರಲಾರೆ” ಎಂದು ಹೇಳಿದ್ದರು ಎಂದು ಮೂಲಗಳು ತಿಳಿಸಿವೆ.
ಅಶೋಕ್ ಗೆಹ್ಲೋಟ್ ಅವರು ರಾಜಸ್ಥಾನದ ಶಾಸಕರಿಗೆ ತಾವು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದಾಗಿ ತಿಳಿದು ಬಂದಿದೆ. ಆದರೆ ನಾನು ನಿಮ್ಮಿಂದ ದೂರವಿರುವುದಿಲ್ಲ” ಎಂದು ಹೇಳಿದ್ದಾರೆಂದು ಗೊತ್ತಾಗಿದೆ.