Thursday, 12th December 2024

ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್ ರಾಜೀನಾಮೆ

ವದೆಹಲಿ: ಸನಾತನ ಸಂಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗಲು ಅಥವಾ ಸಂಪತ್ತಿನ ಸೃಷ್ಟಿಕರ್ತರನ್ನು ನಿಂದಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್ ಅವರು ಪಕ್ಷದ ಎಲ್ಲಾ ಹುದ್ದೆಗಳು ಮತ್ತು ಸದಸ್ಯತ್ವಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.

ವಲ್ಲಭ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದಿರುವ ರಾಜೀನಾಮೆ ಪತ್ರವನ್ನು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ. ಪಕ್ಷ ಮುನ್ನಡೆಯುತ್ತಿರುವ ದಿಕ್ಕು ತೋಚದ ರೀತಿಯಲ್ಲಿ ನೆಮ್ಮದಿ ಇಲ್ಲದಂತಾಗಿದೆ ಎಂದಿ ದ್ದಾರೆ.

ವಲ್ಲಭ ಅವರು, ನಾನು ಸನಾತನ ಸಂಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗಲಾರೆ ಅಥವಾ ಸಂಪತ್ತು ಸೃಷ್ಟಿಸುವವರನ್ನು ನಿಂದಿಸಲು ಸಾಧ್ಯವಿಲ್ಲ. ಹಾಗಾಗಿ ಪಕ್ಷದ ಎಲ್ಲ ಹುದ್ದೆಗಳಿಗೆ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.

ವಲ್ಲಭ್ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ, ನಾನು ಕಾಂಗ್ರೆಸ್‍ಗೆ ಸೇರಿದಾಗ, ಯುವಕರು ಮತ್ತು ಬುದ್ಧಿಜೀವಿಗಳು ಮತ್ತು ಅವರ ಆಲೋಚನೆಗಳನ್ನು ಗೌರವಿಸುವ ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ಎಂದು ನಾನು ನಂಬಿದ್ದೆ, ಆದರೆ ಕೆಲವು ಸಮಯ, ಪಕ್ಷವು ಹೊಂದಾಣಿಕೆ ಮಾಡಲು ಸಾಧ್ಯವಾಗಲಿಲ್ಲ ಎಂದು ನಾನು ಭಾವಿಸಿದೆ. ಯುವಕರು ಹೊಸ ಆಲೋಚನೆಗಳನ್ನು ಹೊಂದಿದ್ದಾರೆ.

ಕಾಂಗ್ರೆಸ್ ಸಂಪೂರ್ಣವಾಗಿ ನೆಲಕಚ್ಚಿದೆ ಮತ್ತು ನವ ಭಾರತದ ಆಕಾಂಕ್ಷೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಈ ಕಾರಣದಿಂದಾಗಿ ಪಕ್ಷವು ಅಧಿಕಾರಕ್ಕೆ ಬರುತ್ತಿಲ್ಲ ಅಥವಾ ಪ್ರಬಲ ಪ್ರತಿಪಕ್ಷದ ಪಾತ್ರವನ್ನು ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ವಲ್ಲಭ್ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಿಂದ ಪಕ್ಷವು ದೂರ ಉಳಿದಿರುವ ನಿಲುವಿನಿಂದ ಅಸಮಾ ಧಾನಗೊಂಡಿದ್ದೇನೆ ಎಂದು ಹೇಳಿದರು.