Thursday, 12th December 2024

ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ರಾಜೀನಾಮೆ

ಚಂಡೀಗಢ: ಮಹತ್ವದ ಬೆಳವಣಿಗೆಯಲ್ಲಿ ಪಂಜಾಬ್ ಸಿಎಂ ಸ್ಥಾನಕ್ಕೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಶನಿವಾರ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ.

ಪಂಜಾಬ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆಗೂ ಮುನ್ನ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಶನಿವಾರ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರಿಗೆ ರಾಜೀನಾಮೆ ಸಲ್ಲಿಸಿದರು.

ಅಮರಿಂದರ್ ಸಿಂಗ್ ಅವರು ಪಂಜಾಬ್ ರಾಜ್ ಭವನಗೇಟ್ ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಂಜಾಬ್ ಸಿಎಂ ಮಾಧ್ಯಮ ಸಲಹೆಗಾರ ರವೀನ್ ತುಕ್ರಾಲ್ ಹೇಳಿದರು. ಅಮರಿಂದರ್ ಸಿಂಗ್ ಅವರ ಪುತ್ರ ರಣಿಂದರ್ ಸಿಂಗ್ ಅವರು ತಮ್ಮ ಟ್ವಿಟರ್ ಹ್ಯಾಂಡಲ್ ನಲ್ಲಿ ಈ ಸುದ್ದಿಯನ್ನು ದೃಢಪಡಿಸಿದ್ದಾರೆ.