ಉತ್ತರಾಖಂಡ್: ಉತ್ತರಾಖಂಡ್ ನ ಮಸ್ಸೂರಿಯಲ್ಲಿ ಶನಿವಾರ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಐದು ಮಂದಿ ಕಾಲೇಜು ವಿದ್ಯಾರ್ಥಿಗಳು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಸಂಭವಿಸಿದೆ.
ಡೆಹ್ರಾಡೂನ್‌ನ ಐಎಂಎಸ್ ಕಾಲೇಜಿನಲ್ಲಿ ಓದುತ್ತಿರುವ ನಾಲ್ವರು ಹುಡುಗರು ಮತ್ತು ಇಬ್ಬರು ಹುಡುಗಿಯರು ಮಸ್ಸೂರಿಗೆ ಪ್ರವಾಸ ಹೋಗಿದ್ದರು ಶನಿವಾರ ಬೆಳಿಗ್ಗೆ ಪ್ರವಾಸ ಮುಗಿಸಿ ಹಿಂತಿರುಗುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ.
ಆರು ಮಂದಿ ವಿದ್ಯಾರ್ಥಿಗಳಿದ್ದ ಎಸ್‌ಯುವಿ ಕಾರು ಮುಸ್ಸೂರಿ-ಡೆಹ್ರಾಡೂನ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಈ ಅವಘಡ ಸಂಭವಿಸಿದೆ, ಅಪಘಾತದಲ್ಲಿ ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯನ್ನು ನ್ಯಾನ್ಸಿ ಎಂದು ಗುರುತಿಸಲಾಗಿದ್ದು ಆಕೆಯ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂದು ಹೇಳಿದ್ದಾರೆ.
ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.