Saturday, 14th December 2024

ಮದ್ಯ ಸಾಗಿಸುತ್ತಿದ್ದ ಕಾರು ಡಿಕ್ಕಿ: ಪೊಲೀಸ್ ಅಧಿಕಾರಿ ಹತ್ಯೆ

ಬೇಗುಸರಾಯ್: ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಕಾರಿಗೆ ಅಡ್ಡಗಟ್ಟಲು ಯತ್ನಿಸಿದ ಪೊಲೀಸ್ ಅಧಿಕಾರಿಗೆ ಡಿಕ್ಕಿ ಹೊಡೆಸಿ ಹತ್ಯೆ ಮಾಡಲಾಗಿದೆ.

ಘಟನೆಯಲ್ಲಿ ಮತ್ತೊಬ್ಬರು ಗಾಯಗೊಂಡಿದ್ದಾರೆ. ರಾಜ್ಯದ ಮದ್ಯ ನಿಷೇಧಿಸಲಾಗಿದೆ. ಆದರೂ ಕಾನೂನು ಉಲ್ಲಂಘಿಸಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದ ನಂತರ ಅವರು ವಾಹನ ನಿಲ್ಲಿಸಲು ಯತ್ನಿಸುತ್ತಿದ್ದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಬ್ ಇನ್ಸ್ಪೆಕ್ಟರ್ ಖಾಮಸ್ ಚೌಧರಿ(52) ಅವರನ್ನು ನೌಕೋಥಿ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾಗಿತ್ತು.

ಅಪರಾಧದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳನ್ನು ಬಂಧಿಸಲು ಉಪವಿಭಾಗೀಯ ಪೊಲೀಸ್ ಅಧಿಕಾರಿ ಚಂದನ್ ಕುಮಾರ್ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಕಾರಿನ ಮಾಲೀಕರನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.