Friday, 13th December 2024

ಕ್ರೈಸ್ತ ಧರ್ಮಕ್ಕೆ 400 ಜನರ ಮತಾಂತರ: ಒಂಬತ್ತು ಮಂದಿ ವಿರುದ್ಧ ಪ್ರಕರಣ ದಾಖಲು

ಮೀರತ್‌: ಯುಪಿಯ ಮೀರತ್‌ನಲ್ಲಿ 400 ಜನರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸುವಂತೆ ಒತ್ತಾಯಿಸಿದ ಆರೋಪದ ಮೇಲೆ ಒಂಬತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಸಂತ್ರಸ್ತರೊಂದಿಗೆ ಸಂಪರ್ಕಕ್ಕೆ ಬಂದ ಕೆಲವರು, ಅಕ್ರಮವಾಗಿ ಇತರ ಧರ್ಮಗಳಿಗೆ ಮತಾಂತರಗೊಳ್ಳಲು ಜನರನ್ನು ಆರೋಪಿಗಳು ಒತ್ತಾಯಿಸಿದ್ದಾರೆ.

ಇದರ ಜೊತೆಗೆ ಹಿಂದೂ ದೇವರು ಮತ್ತು ದೇವತೆಗಳ ವಿಗ್ರಹಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದಾರೆ ಎಂದು ಸಂತ್ರಸ್ತರು ಹೇಳಿದ್ದಾರೆ.

ಶುಕ್ರವಾರ ಸಂತ್ರಸ್ತರು ಬಿಜೆಪಿ ನಾಯಕನೊಂದಿಗೆ ಬ್ರಹ್ಮಪುತ್ರಿ ಪೊಲೀಸ್ ಠಾಣೆಗೆ ಆಗಮಿಸಿ, ಆರೋಪಿಗಳು ಧಾರ್ಮಿಕ ಮತಾಂತರ ಕ್ಕಾಗಿ ಹಣ ಮತ್ತು ಆಹಾರದ ಆಮಿಷ ಒಡ್ಡಿದ್ದಾರೆ. ಹಿಂದೂ ದೇವತೆಗಳ ವಿಗ್ರಹಗಳು, ಪ್ರತಿಮೆಗಳು ಮತ್ತು ಭಾವಚಿತ್ರಗಳನ್ನು ತೆಗೆದು ಕ್ರಿಶ್ಚಿಯನ್ ಧರ್ಮ ಸ್ವೀಕರಿಸುವಂತೆ ಗ್ರಾಮಸ್ಥರನ್ನು ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ನಮ್ಮ ಮೇಲೆ ಧಾರ್ಮಿಕ ಮತಾಂತರಕ್ಕೆ ಒತ್ತಡ ಹೇರಲಾಯಿತು. ನಮ್ಮ ಆಧಾರ್ ಕಾರ್ಡ್‌ನಲ್ಲಿ ನಮ್ಮ ಹೆಸರನ್ನು ಬದಲಾಯಿಸು ವಂತೆ ಕೇಳಲಾಯಿತು. ದೀಪಾವಳಿಯ ದಿನ ನಾವು ಪೂಜೆ ಮಾಡುತ್ತಿದ್ದಾಗ, ಆರೋಪಿಗಳು ನಮ್ಮ ಮನೆಗೆ ನುಗ್ಗಿ ದೇವರ ವಿಗ್ರಹ ಗಳನ್ನು ಧ್ವಂಸಗೊಳಿಸಿದ್ದಾರೆ.

ನೀವು ನಿಮ್ಮ ಧರ್ಮವನ್ನು ಪರಿವರ್ತಿಸಿದಾಗ ನೀವು ಯಾಕೆ ಹೀಗೆ ಮಾಡುತ್ತಿದ್ದೀರಿ? ನಾವು ಇದನ್ನು ವಿರೋಧಿಸಿದಾಗ ಅವರು ನಮಗೆ ಜೀವ ಬೆದರಿಕೆ ಹಾಕಿದರು ಎಂದು ದೂರುದಾರರು ಪೊಲೀಸರಿಗೆ ತಿಳಿಸಿದ್ದಾರೆ.ಪ್ರಕರಣ ಸಂಬಂಧ ಛಬಿಲಿ ಅಲಿಯಾಸ್ ಶಿವ, ಬಿನ್ವಾ, ಅನಿಲ್, ಸರ್ದಾರ್, ನಿಕ್ಕು, ಬಸಂತ್, ಪ್ರೇಮಾ, ತಿತ್ಲಿ ಮತ್ತು ರಾಣಿ ಎಂಬುವವರ ವಿರುದ್ಧ ಎಫ್‌ಐಆರ್‌ ದಾಖಲಾ ಗಿದೆ.