Wednesday, 11th December 2024

ಪೊಲೀಸ್ ಠಾಣೆಯಲ್ಲಿ ಅಗ್ನಿ ಅವಘಡ: ವಾಹನ ಬೆಂಕಿಗೆ ಆಹುತಿ

ಜಮ್ಮು : ಸತ್ವಾರಿ ಪೊಲೀಸ್ ಠಾಣೆಯಲ್ಲಿ ಶನಿವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಠಾಣೆಯಲ್ಲಿದ್ದ ಹಲವಾರು ವಾಹನ ಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಪ್ರಾಣಹಾನಿ ಸಂಭವಿಸಿಲ್ಲ.

ಠಾಣೆಯ ಹೊರಗಿನ ತೆರೆದ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ವಶಪಡಿಸಿಕೊಂಡ ವಾಹನಗಳು ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಹಾಯದಿಂದ ಬೆಂಕಿಯನ್ನು ನಿಯಂತ್ರಿಸಲಾಯಿತು. ಪೊಲೀಸ್ ಠಾಣೆ ಕಟ್ಟಡಕ್ಕೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಜಮ್ಮು ಪೊಲೀಸರು ತಿಳಿಸಿದ್ದಾರೆ.