Thursday, 12th December 2024

ಮಾತುಕತೆಗಳ ಅವಶ್ಯಕತೆ ಇಲ್ಲ, ಸುಪ್ರೀಂಕೋರ್ಟ್ ನಿರ್ದೇಶನವೇ ಅಂತಿಮ: ತಮಿಳುನಾಡು ಜಲಸಂಪನ್ಮೂಲ ಸಚಿವ

ಚೈನ್ನೈ: ಕಾವೇರಿ ನೀರು ಹಾರೈಸುವ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಮಾತುಕತೆಗಳ ಅವಶ್ಯಕತೆ ಇಲ್ಲ ಸುಪ್ರೀಂಕೋರ್ಟ್ ನಿರ್ದೇಶನವೇ ಅಂತಿಮ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.

ತಮಿಳುನಾಡಿಗೆ 5000 ಕ್ಯೂಸೆಕ್​ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೆ ತಮಿಳು ನಾಡು ಜಲಸಂಪನ್ಮೂಲ ಸಚಿವ ದೊರೈಮುರುಗನ್​ ಹೇಳಿದ್ದಾರೆ.

ಕಾವೇರಿ ನೀರು ಹಂಚಿಕೆ ಕುರಿತಾಗಿ ಸುಪ್ರೀಂ ಕೋರ್ಟ್​ ತೀರ್ಪಿನ ಕುರಿತು ಪ್ರತಿಕ್ರಿಯಿಸಿದ ಅವರು, ಯಾವುದೇ ಕಾರಣಕ್ಕೂ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಮಾತಿಲ್ಲ ಎಂದು ತಿಳಿಸಿದ್ದಾರೆ.

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್​ ತೀರ್ಪು ಅಂತಿಮವಾಗಿದ್ದು, ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಸಚಿವ ದೊರೈಮುರುಗನ್​ ಹೇಳಿದ್ದಾರೆ.

ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್​ ನಿರು ಹರಿಸುವಂತೆ ಆದೇಶಿಸಿರುವ ಕಾವೇರಿ ನದಿ ನೀರು ಪ್ರಾಧಿಕಾರ ಹಾಗೂ ನಿಯಂತ್ರಣ ಸಮಿತಿ ನೀಡಿರುವ ಆದೇಶದ ವಿಚಾರವಾಗಿ ಸುಪ್ರೀಂ ಕೋರ್ಟ್​ ಮದ್ಯಪ್ರವೇಶಿಸಲು ನಿರಾಕರಿಸಿದೆ.