Friday, 22nd November 2024

ತಮಿಳುನಾಡಿಗೆ ಮತ್ತೆ 15 ದಿನ 2600 ಕ್ಯೂಸೆಕ್ಸ್ ನೀರು ಬಿಡ್ಲೇಬೇಕು

ನವದೆಹಲಿ: ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿ ದಿನ 2600 ಕ್ಯೂಸೆಕ್ಸ್ ನೀರು ಹರಿಸುವಂತೆ ನಿಯಂತ್ರಣ ಸಮಿತಿ ರಾಜ್ಯಕ್ಕೆ ಸೂಚನೆ ನೀಡಿದೆ.

ಅಕ್ಟೋಬರ್ ಅಂತ್ಯದವರೆಗೆ ಪ್ರತಿದಿನ 3 ಸಾವಿರ ಕ್ಯೂಸೆಕ್​ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಕಳೆದ ಬಾರಿ ಸಭೆಯಲ್ಲಿ ಆದೇಶಿಸಿತ್ತು.

ಆದೇಶದ ಅವಧಿ ಮುಕ್ತಾಯವಾಗುತ್ತಿರುವ ಬೆನ್ನಲ್ಲೇ ಮತ್ತೆ ನೀರು ಹರಿಸಲು ಸೂಚನೆ ನೀಡಿದೆ. ಕರ್ನಾಟಕದ ಪರ ಎಸಿಎಸ್ ರಾಕೇಶ್ ಸಿಂಗ್ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಭಾಗವಹಿಸಿ ವಾದ ಮಂಡಿಸಿದ್ದರೂ ರಾಜ್ಯಕ್ಕೆ ಹೆಚ್ಚಿನ ಪ್ರಯೋಜನವಾಗಿಲ್ಲ.

ತಮಿಳುನಾಡಿನಲ್ಲಿ ಹಿಂಗಾರು ಮಳೆಯಾಗುತ್ತಿದ್ದು ಮೆಟ್ಟೂರು ಜಲಾಶಯಕ್ಕೆ ನೀರು ಹರಿದುಹೋಗುತ್ತಿದೆ, ಕರ್ನಾಟಕ ರಾಜ್ಯಕ್ಕಿಂತ ತಮಿಳುನಾಡು ಹೆಚ್ಚಿನ ಹಿಂಗಾರು ಮಳೆಯನ್ನು ಪಡೆಯುತ್ತದೆ.

ಈ ನಡುವೆಯೇ ಪ್ರತಿ ಬಾರಿ ಸಭೆ ನಡೆದಾಗಲೂ ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯಕ್ಕೆ ತಮಿಳುನಾಡಿಗೆ ನೀರು ಹರಿಸಲು ಸೂಚನೆ ನೀಡುತ್ತಿರು ವುದು ರಾಜ್ಯಕ್ಕೆ ಮಾರಕವಾಗಿದೆ.