Friday, 13th December 2024

Kolkata murder probe : ಆರ್‌ಜಿ ಕರ್ ಆಸ್ಪತ್ರೆಯ ಮಾಜಿ ಪ್ರಿನ್ಸಿಪಾಲ್, ಪೊಲೀಸ್ ಅಧಿಕಾರಿಯನ್ನು ಬಂಧಿಸಿದ ಸಿಬಿಐ; ಹಲವು ಆರೋಪಗಳು ದಾಖಲು

Kolkata murder probe

ನವದೆಹಲಿ: ಸ್ನಾತಕೋತ್ತರ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ (Kolkata murder probe) ಎಫ್ಐಆರ್ ದಾಖಲಿಸಲು ವಿಳಂಬ ಮತ್ತು ಸಾಕ್ಷ್ಯಗಳನ್ನು ನಾಶ ಮಾಡಲು ಯತ್ನಿಸಿದ ಆರೋಪದ ಮೇಲೆ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಪೊಲೀಸ್ ಅಧಿಕಾರಿರೊಬ್ಬರ್ನು ಕೇಂದ್ರ ತನಿಖಾ ದಳ (ಸಿಬಿಐ) ಶನಿವಾರ ಬಂಧಿಸಿದೆ.

ಈ ಹಿಂದೆ, ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದ ಪ್ರತ್ಯೇಕ ತನಿಖೆಯಲ್ಲಿ ಘೋಷ್ ಅವರನ್ನು ಕೇಂದ್ರ ಸಂಸ್ಥೆ ಬಂಧಿಸಿತ್ತು. ಅವರು ಸೆಪ್ಟೆಂಬರ್ 23 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಬಂಧಿತ ಪೊಲೀಸ್ ಅಧಿಕಾರಿಯನ್ನು ತಾಲಾ ಪೊಲೀಸ್ ಠಾಣೆಯ ಎಸ್ಎಚ್ಒ ಅಭಿಜಿತ್ ಮಂಡಲ್ ಎಂದು ಗುರುತಿಸಲಾಗಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯ ಭಾಗವಾಗಿ ಸಿಬಿಐ ಆಗಸ್ಟ್ 26 ರಂದು ಮಾಜಿ ಪ್ರಾಂಶುಪಾಲರ ಮೇಲೆ ಎರಡನೇ ಸುತ್ತಿನ ಪಾಲಿಗ್ರಾಫ್ ಪರೀಕ್ಷೆಗಳನ್ನು ನಡೆಸಿತ್ತು. ಸೆಪ್ಟೆಂಬರ್ 17 ರಂದು ಸಲ್ಲಿಸಲಿರುವ ತನಿಖೆಯ ಪ್ರಗತಿ ವರದಿಯನ್ನು ಸಲ್ಲಿಸಲು ಕಲ್ಕತ್ತಾ ಹೈಕೋರ್ಟ್ ಸಿಬಿಐಗೆ ಮೂರು ವಾರಗಳ ಕಾಲಾವಕಾಶ ನೀಡಿದೆ.

ಆಗಸ್ಟ್ 9 ರಂದು ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ 31 ವರ್ಷದ ವೈದ್ಯೆಯ ಶವ ಪತ್ತೆಯಾಗಿತ್ತು. ಕೊಲೆಯಾಗುವ ಮೊದಲು ಆಕೆಯ ಮೇಲೆ ಕ್ರೂರವಾಗಿ ಅತ್ಯಾಚಾರ ಎಸಗಲಾಗಿದೆ ಎಂದು ಶವಪರೀಕ್ಷೆ ವರದಿಗಳು ಸೂಚಿಸಿವೆ.

ಹಾಲ್ ನವೀಕರಣಕ್ಕೆ ಆದೇಶ

ಶವ ಪತ್ತೆಯಾದ ಸೆಮಿನಾರ್ ಹಾಲ್ ಬಳಿ ನವೀಕರಣಕ್ಕೆ ಘೋಷ್ ಆದೇಶಿಸಿದ್ದರು ಎಂದು ಬಿಜೆಪಿ ಆರೋಪಿಸಿದೆ. ಕೇಂದ್ರ ಸಚಿವ ಮತ್ತು ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ಸುಕಾಂತ ಮಜುಂದಾರ್ ಅವರು ಸಂದೀಪ್ ಘೋಷ್ ಸಹಿ ಮಾಡಿದ್ದಾರೆ ಎನ್ನಲಾದ ಪತ್ರವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: DY Chandrachud : ಧ್ವನಿ ಎತ್ತರಿಸಿ ಮಾತನಾಡಿದ ಲಾಯರ್‌ಗಳಿಗೆ ಕೋರ್ಟ್‌ನಲ್ಲೇ ಬುದ್ಧಿ ಹೇಳಿದ ಸುಪ್ರೀಂ ಕೋರ್ಟ್‌ ಜಡ್ಜ್‌

“ಆರ್ಜಿ ಕಾರ್ ವೈದ್ಯಕೀಯ ಕಾಲೇಜಿನ ಮಾಜಿ ನಿರ್ದೇಶಕ ಸಂದೀಪ್ ಘೋಷ್ ಸಹಿ ಮಾಡಿದ ಆದೇಶವು ಸಂತ್ರಸ್ತೆಯ ಸಾವಿನ ಒಂದು ದಿನದ ನಂತರ ಆಗಸ್ಟ್ 10 ರಂದು ಬಂದಿದೆ. ಅಪರಾಧದ ಜಾಗವನ್ನು ತಿರುಚಲಾಗಿದೆ ಎಂದು ಸಹೋದ್ಯೋಗಿಗಳು ಮತ್ತು ಪ್ರತಿಭಟನಾಕಾರರಿಂದ ಆರೋಪಗಳ ಹೊರತಾಗಿಯೂ, ಪೊಲೀಸ್ ಆಯುಕ್ತರು ಅದನ್ನು ನಿರಾಕರಿಸಿದರು” ಎಂದು ಬಿಜೆಪಿ ನಾಯಕ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು.