ಮುಂಬೈ : ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಶನಿವಾರ ಪ್ರಥಮ ಮಾಹಿತಿ ವರದಿ (ಎಫ್ ಐಆರ್) ದಾಖಲಿಸಿದೆ. ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಮಾಡಿದ ಭ್ರಷ್ಟಾಚಾರದ ಆರೋಪದ ಮೇಲೆ ಎಫ್ ಐಆರ್ ದಾಖಲಾಗಿದೆ.
ಮುಂಬೈನ ಬಾರ್ ಗಳು, ರೆಸ್ಟೋರೆಂಟ್ ಗಳು ಮತ್ತು ಹೋಟೆಲ್ ಗಳಿಂದ ಹಣ ಸಂಗ್ರಹಿಸಲು ನಿರ್ದೇಶನ ನೀಡಿದ್ದಾರೆ ಎಂದು ಪರಮ್ ಬೀರ್ ಸಿಂಗ್ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ ಆರೋಪಿಸಿದ ನಂತರ ಏ.14 ರಂದು ಈ ಬಗ್ಗೆ ವಿಚಾರಣೆ ನಡೆಸಲು ಮಾಜಿ ಸಚಿವರನ್ನು ತನಿಖಾ ಸಂಸ್ಥೆ ಕರೆಸಿತ್ತು.
ಸಿಂಗ್ ಅವರ ಪ್ರಕಾರ, ಮುಖೇಶ್ ಅಂಬಾನಿ ಭದ್ರತಾ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಅಮಾನತು ಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜ್ ಅವರಿಗೆ ಈ ಮೂಲಗಳಿಂದ ತಿಂಗಳಿಗೆ ₹100 ಕೋಟಿ ರೂ.ಗಳನ್ನು ಸಂಗ್ರಹಿಸು ವಂತೆ ದೇಶ್ ಮುಖ್ ಹೇಳಿದ್ದಾರೆ ಎನ್ನಲಾಗಿದೆ.