Thursday, 19th September 2024

ಮಾಜಿ ಲೆಫ್ಟಿನೆಂಟ್ ಗವರ್ನರ್ ಮಲಿಕ್ ನಿವಾಸದ ಮೇಲೆ ಸಿಬಿಐ ದಾಳಿ

ವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ಲೆಫ್ಟಿನೆಂಟ್ ಗವರ್ನರ್ ಸತ್ಯಪಾಲ್ ಮಲಿಕ್ ಅವರ ದೆಹಲಿಯ ನಿವಾಸದ ಮೇಲೆ ಕೇಂದ್ರ ತನಿಖಾ ದಳ (ಸಿಬಿಐ) ಗುರುವಾರ ದಾಳಿ ನಡೆಸಿದೆ.

ಕಿರು ಜಲವಿದ್ಯುತ್ ಯೋಜನೆಯ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಂಸ್ಥೆ ದಾಳಿ ನಡೆಸಿದೆ.

ಕಿರು ಜಲವಿದ್ಯುತ್ ಯೋಜನೆಯ 2,200 ಕೋಟಿ ರೂ.ಗಳ ಸಿವಿಲ್ ಕಾಮಗಾರಿಗಳನ್ನು ನೀಡುವಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಸಿಬಿಐ ದೆಹಲಿ ಮತ್ತು ಜಮ್ಮುವಿನ ಎಂಟು ಸ್ಥಳಗಳಲ್ಲಿ ದಾಳಿ ನಡೆಸಿದೆ. ಆಗಸ್ಟ್ 23, 2018 ಮತ್ತು ಅಕ್ಟೋಬರ್ 30, 2019 ರ ನಡುವೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್, ಯೋಜನೆಗೆ ಸಂಬಂಧಿಸಿದ ಒಂದು ಕಡತ ಸೇರಿದಂತೆ ಎರಡು ಕಡತಗಳನ್ನು ತೆರವುಗೊಳಿಸಲು ತನಗೆ 300 ಕೋಟಿ ರೂ.ಗಳ ಲಂಚದ ಆಫರ್ ನೀಡಲಾಗಿತ್ತು ಎಂದು ಆರೋಪಿಸಲಾಗಿದೆ.

Leave a Reply

Your email address will not be published. Required fields are marked *