Friday, 13th December 2024

ಹಿಂದಿ, ಇಂಗ್ಲಿಷ್‌ನಲ್ಲಿ ಸಿಬಿಎಸ್‌ಇ ಬೋರ್ಡ್ ಪರೀಕ್ಷೆ ಪ್ರಶ್ನೆಪತ್ರಿಕೆ ಮುದ್ರಿಸಲು ಆದ್ಯತೆ

CBSE

ನವದೆಹಲಿ: ವಿದ್ಯಾರ್ಥಿಗಳ ಬೇಡಿಕೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಸಿಬಿಎಸ್‌ಇ ಬೋರ್ಡ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಮುದ್ರಿಸಲು ಶಾಲೆಗಳಿಗೆ ತಿಳಿಸಿದೆ.

ಈ ಆದೇಶಕ್ಕೆ ಆದ್ಯತೆ ನೀಡುವಂತೆ ಮಂಡಳಿ, ಶಾಲಾ ಮುಖ್ಯಸ್ಥರು ಮತ್ತು ಪರೀಕ್ಷಾ ಕೇಂದ್ರದ ಅಧೀಕ್ಷಕರನ್ನು ಕೇಳಿದೆ.

ಪ್ರತಿ ವಿದ್ಯಾರ್ಥಿಗೆ ಬೋರ್ಡ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಎರಡೂ ಭಾಷೆಗಳಲ್ಲಿ ಮುದ್ರಿಸುವ ಅಗತ್ಯವಿಲ್ಲ ಎಂದು ಸಿಬಿಎಸ್‌ಇ ಸ್ಪಷ್ಟಪಡಿಸಿದೆ.

ಯಾವುದೇ ಅಭ್ಯರ್ಥಿಗೆ ಪ್ರಶ್ನೆ ಪತ್ರಿಕೆಯ ಹಿಂದಿ ಆವೃತ್ತಿಯ ಅಗತ್ಯವಿದ್ದರೆ ಮಾತ್ರ ಹಿಂದಿ ಆವೃತ್ತಿಯ ಪ್ರಶ್ನೆ ಪತ್ರಿಕೆ ಮುದ್ರಿಸಲಾಗುತ್ತದೆ’ ಎಂದು ಅದು ಹೇಳಿದೆ.

‘ಯಾವುದೇ ವಿದ್ಯಾರ್ಥಿಗೆ ಅಗತ್ಯವಿದ್ದರೆ ಮಾತ್ರ ಇಂಗ್ಲಿಷ್ ಆವೃತ್ತಿಯ ಪ್ರಶ್ನೆ ಪತ್ರಿಕೆಯನ್ನು ಮುದ್ರಿಸಬೇಕು’ ಎಂದು ಮಂಡಳಿಯು ಶಾಲೆಗಳಿಗೆ ಸೂಚನೆ ನೀಡಿದೆ ಎಂದು ಮಂಡಳಿಯ ಪ್ರಕಟಣೆ ತಿಳಿಸಿದೆ.