Thursday, 12th December 2024

ಸಿಬಿಎಸ್‌ಇ: 10, 12ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯ 10ನೇ ಮತ್ತು 12ನೇ ತರಗತಿಯ ಪರೀಕ್ಷೆಗೆ ದಿನಾಂಕ ಪ್ರಕಟವಾಗಿದೆ.

ಎರಡೂ ತರಗತಿಗಳ ಪರೀಕ್ಷೆಗಳು ಫೆಬ್ರವರಿ 15ರಂದೇ ಆರಂಭವಾಗಲಿವೆ ಎಂದು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ ಪ್ರಕಟಣೆ ಯಲ್ಲಿ ತಿಳಿಸಿದೆ.

10ನೇ ತರಗತಿ ಪರೀಕ್ಷೆ ಫೆಬ್ರವರಿ 15ರಿಂದ ಆರಂಭವಾಗಿ ಮಾರ್ಚ್ 21ಕ್ಕೆ ಮುಕ್ತಾಯವಾಗ ಲಿವೆ. ಹಾಗೇ 12ನೇ ತರಗತಿ ಪರೀಕ್ಷೆ ಫೆಬ್ರವರಿ 15ರಂದು ಪ್ರಾರಂಭವಾಗಿ, ಏಪ್ರಿಲ್ 5ಕ್ಕೆ ಯಾಗಲಿವೆ.

ಉಭಯ ತರಗತಿಗಳ ಪರೀಕ್ಷೆ ಬೆಳಗ್ಗೆ 10.30ಕ್ಕೆ ಆರಂಭವಾಗಿ ಮಧ್ಯಾಹ್ನ 1.30ಕ್ಕೆ ಮುಕ್ತಾಯ ವಾಗಲಿವೆ.

ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಓದಿಕೊಳ್ಳಲು 15 ನಿಮಿಷ ಹೆಚ್ಚುವರಿ ಕಾಲಾವಕಾಶ ನೀಡಲಾಗಿದೆ ಎಂದು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Read E-Paper click here