Friday, 13th December 2024

ವಿಚಾರಣೆಗೆ ಗೈರಾದ ನಟ ಒಬೇರಾಯ್ ಪತ್ನಿಗೆ ಸಿಸಿಬಿಯಿಂದ ಮತ್ತೊಂದು ನೋಟೀಸ್

ಮುಂಬೈ: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಪತ್ನಿಗೆ ಶನಿವಾರ ಸಿಸಿಬಿ ಮತ್ತೆ ನೋಟಿಸ್ ಜಾರಿ ಮಾಡಿದೆ.

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಬಾಲಿವುಡ್ ನಟ ವಿವೇಕ್ ಒಬೇರಾಯ್ ಪತ್ನಿ ಪ್ರಿಯಾಂಕಾ ಆಳ್ವಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿತ್ತು. ಆದರೆ ಪ್ರಿಯಾಂಕಾ ಹಾಜರಾಗದ ಕಾರಣ ಮತ್ತೆ ನೋಟೀಸ್ ಜಾರಿ ಮಾಡಿರುವು ದಾಗಿ ಸಿಸಿಬಿ ಮೂಲಗಳು ತಿಳಿಸಿವೆ. .

ಸಿಸಿಬಿ ಪೊಲೀಸರು ಇಂದು ನೋಟಿಸ್ ಜಾರಿ ಮಾಡಿದ್ದಾರೆ. ವಾಟ್ಸ್ ಆಪ್ ಮೂಲಕ ಪ್ರಿಯಾಂಕಾ ಆಳ್ವಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದಾರೆ ಎನ್ನಲಾಗಿದೆ.