ಚೆನ್ನೈ: ಭಾರತೀಯ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿ 14 ಮಂದಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕೂನೂರಿನಲ್ಲಿ ಪತನ ಗೊಂಡು, ಘಟನೆಯಲ್ಲಿ ಸಾವಿನ ಸಂಖ್ಯೆ 11ಕ್ಕೇರಿದೆ.
ಸಿಡಿಎಸ್ ಬಿಪಿನ್ ರಾವತ್ ಪತ್ನಿ ಮಧುಲಿಕಾ ಅವರು ಮೃತಪಟ್ಟಿದ್ದಾರೆ. ದುರಂತ ಕ್ಷಣಕ್ಷಣಕ್ಕೂ ಆತಂಕ ಹೆಚ್ಚಿಸುತ್ತಿದ್ದು, ಬಿಪಿನ್ ರಾವತ್ ಚೇತರಿಕೆಗಾಗಿ ದೇಶಾದ್ಯಂತ ಜನರು ಪ್ರಾರ್ಥನೆ ಮಾಡುತ್ತಿದ್ದಾರೆ.
ವೆಲ್ಲಿಂಗ್ಟನ್ನ ಸೇನಾ ಶಾಲೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್.ಎಸ್.ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರುಸೇವಕ್ ಸಿಂಗ್, ನಾಯಕ್ ಜಿತೇಂದರ್ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ ಸಾಯ್ತೇಜ್, ಹವಲ್ದಾರ್ ಸತ್ಪಾಲ್ ಸೇರಿದಂತೆ 14 ಮಂದಿ ಬುಧವಾರ ಸೇನಾ ಹೆಲಿಕಾಪ್ಟರ್ನಲ್ಲಿ ಪ್ರಯಾಣ ಮಾಡುತ್ತಿದ್ದರು.