Sunday, 1st December 2024

ಮುಕುಲ್ ರಾಯ್ ಝಡ್ ಭದ್ರತೆ ವಾಪಸ್ ಪಡೆದ ಕೇಂದ್ರ

ನವದೆಹಲಿ: ಭಾರತೀಯ ಜನತಾ ಪಕ್ಷ ತೊರೆದು ಮತ್ತೆ ತೃಣಮೂಲ ಕಾಂಗ್ರೆಸ್ ಸೇರ್ಪಡೆಗೊಂಡ ಬೆನ್ನಲ್ಲೇ ಮುಕುಲ್ ರಾಯ್ ಗೆ ನೀಡಲಾಗಿದ್ದ ಝಡ್ ಭದ್ರತೆಯನ್ನು ವಾಪಸ್ ಪಡೆದಿರುವುದಾಗಿ ವರದಿ ತಿಳಿಸಿದೆ.

ಪಶ್ಚಿಮಬಂಗಾಳದ ವಿಧಾನಸಭಾ ಚುನಾವಣೆಗೂ ಮುನ್ನ ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಮುಕುಲ್ ರಾಯ್ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದರು. ನಂತರ ಕೇಂದ್ರ ಸರ್ಕಾರ ರಾಯ್ ಗೆ ಝಡ್ ಶ್ರೇಣಿಯ ಭದ್ರತೆ ನೀಡಿತ್ತು.

ಬದಲಾದ ರಾಜಕೀಯ ಸನ್ನಿವೇಶದ ಪರಿಣಾಮ ಮುಕುಲ್ ರಾಯ್ ಮತ್ತೆ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಸೇರ್ಪಡೆ ಗೊಂಡಿದ್ದರು.

ಪಶ್ಚಿಮಬಂಗಾಳ ಸರ್ಕಾರ ಮುಕುಲ್ ರಾಯ್ ಗೆ ಈಗಾಗಲೇ ವೈ ಶ್ರೇಣಿಯ ಭದ್ರತೆಯನ್ನು ಒದಗಿಸಿರುವುದಾಗಿ ವರದಿ ವಿವರಿಸಿದೆ.