Thursday, 3rd October 2024

ಶತಕದ ಜತೆಯಾಟ ನೀಡಿದ ರೋಹಿತ್‌-ಶಿಖರ್‌

ಪುಣೆ: ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ತಂಡಕ್ಕೆ ಭರ್ಜರಿ ಆರಂಭ ಸಿಕ್ಕಿದೆ. ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಜೋಡಿ ಶತಕದ ಜೊತೆಯಾಟವಾಡುವ ಮೂಲಕ ವಿಶ್ವದಾಖಲೆ ಬರೆದಿದೆ.

ಮಹಾರಾಷ್ಟ್ರ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತರೂ ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ತಂಡಕ್ಕೆ ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಜೋಡಿ ಭರ್ಜರಿ ಆರಂಭ ನೀಡಿದೆ.

ಕೇವಲ 86 ಎಸೆತಗಳಲ್ಲಿ 16 ಬೌಂಡರಿಗಳ ಸಹಿತ 103 ರನ್ ಕಲೆಹಾಕಿದೆ. ಶಿಖರ್ ಧವನ್ 63 ರನ್ ಸಿಡಿಸಿ, ತಮ್ಮ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ವೃತ್ತಿ ಜೀವನದ 32ನೇ ಅರ್ಧಶತಕವನ್ನು ತಮ್ಮದಾಗಿಸಿಕೊಂಡರು. ಧವನ್ ಗೆ ಉತ್ತಮ ಸಾಥ್ ನೀಡಿದ ರೋಹಿತ್ ಶರ್ಮಾ ಕೂಡ 37 ಎಸೆತಗಳಲ್ಲಿ 37 ರನ್ ಗಳಿಸಿ ಅದಿಲ್ ರಶೀದ್ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರು.

ಇತ್ತೀಚಿನ ವರದಿ ಪ್ರಕಾರ, ಭಾರತ ನಾಯಜಕ ವಿರಾಟ್ ಕೊಹ್ಲಿ ವಿಕೆಟ್‌ ಕಳೆದುಕೊಂಡು ಮೂರು ವಿಕೆಟ್ ನಷ್ಟಕ್ಕೆ 157 ರನ್‌ ಗಳಿಸಿತ್ತು.