Monday, 25th November 2024

27 ರಂದು 6 ನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾ

ವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 27 ರಂದು 6 ನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾದಲ್ಲಿ ವಿದ್ಯಾರ್ಥಿ ಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಾದ ನಡೆಸಲಿದ್ದಾರೆ.

ಕಾರ್ಯಕ್ರಮವು ನವದೆಹಲಿಯ ಟಾಲ್ಕಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯ ಲಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಪರೀಕ್ಷಾ ಪೇ ಚರ್ಚಾ ನೋಂದಣಿಗಳು ದುಪ್ಪಟ್ಟಾಗಿದೆ ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ.

ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ರಾಜ್ಯ ಮಂಡಳಿಗಳು, CBSE, ಕೇಂದ್ರೀಯ ವಿದ್ಯಾಲಯ ಸಂಘಟನೆ, ನವೋದಯ ವಿದ್ಯಾಲಯ ಸಮಿತಿ ಮತ್ತು ಇತರ ಮಂಡಳಿಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ್ದಾರೆ. 31 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು, 5 ಲಕ್ಷಕ್ಕೂ ಹೆಚ್ಚು ಶಿಕ್ಷಕರು ಮತ್ತು ಸುಮಾರು 2 ಲಕ್ಷ ಪೋಷಕರು ಪರೀಕ್ಷಾ ಪರ್ ಚರ್ಚಾಗೆ ನೋಂದಾಯಿಸಿ ಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

150 ದೇಶಗಳ ವಿದ್ಯಾರ್ಥಿಗಳು, 51 ದೇಶಗಳ ಶಿಕ್ಷಕರು ಮತ್ತು 50 ದೇಶಗಳ ಪೋಷಕರು ಸಹ ಕಾರ್ಯಕ್ರಮಕ್ಕೆ ನೋಂದಾಯಿಸಿ ಕೊಂಡಿದ್ದಾರೆ.

ಭಾಗವಹಿಸುವವರನ್ನು ಆಯ್ಕೆ ಮಾಡಲು 2022 ರ ನವೆಂಬರ್ 25 ಮತ್ತು ಡಿಸೆಂಬರ್ 30 ರ ನಡುವೆ ವಿವಿಧ ವಿಷಯಗಳ ಕುರಿತು ಆನ್‌ಲೈನ್ ಸೃಜನಶೀಲ ಬರವಣಿಗೆ ಸ್ಪರ್ಧೆಯನ್ನು ನಡೆಸಲಾಯಿತು.