Wednesday, 11th December 2024

ತೌಸ್ಸಂಡ್ ಲೈಟ್ಸ್ ಕ್ಷೇತ್ರದ ಅಭ್ಯರ್ಥಿ ಖುಷ್ಬೂ ಪರ ’ಚಾಣಕ್ಯ’ನ ಪ್ರಚಾರ

ಚೆನ್ನೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ತೌಸ್ಸಂಡ್ ಲೈಟ್ಸ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಖುಷ್ಬೂ ಸುಂದರ್ ಪರವಾಗಿ ಭರ್ಜರಿ ರೋಡ್ ಶೋ ನಡೆಸಿದರು.

ಈ ಸಂದರ್ಭದಲ್ಲಿ ಶಾ ಮಾತನಾಡಿ, ವಂಶ ರಾಜಕಾರಣ ಮತ್ತು ಭ್ರಷ್ಟತೆಯಿಂದ ಕೂಡಿರುವ ಡಿಎಂಕೆ- ಕಾಂಗ್ರೆಸ್ ನ್ನು ಸೋಲಿಸಿ ದಾಗ ಮಾತ್ರ ರಾಜ್ಯದಲ್ಲಿ ಅಭಿವೃದ್ಧಿಯಾಗಲು ಸಾಧ್ಯ ಎಂದರು.

ತಮಿಳುನಾಡಿನ ಎಂಜಿಆರ್ ಹಾಗೂ ಜಯಲಲಿತಾ ಅವರ ಕನಸನ್ನು ನನಸು ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಿಂದ ಮಾತ್ರ ಸಾಧ್ಯ. ಹೀಗಾಗಿ ಬಿಜೆಪಿಗೆ ಮತ ಹಾಕಿ ಎಂದು ಮನವಿ ಮಾಡಿದರು. ತಮಿಳುನಾಡು ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಅಬ್ಬರದ ಪ್ರಚಾರ ಶುರುವಾಗಿದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily