Saturday, 14th December 2024

ಚನ್ನಿ- ಪಂಜಾಬ್‌ನ ’ಕೈ’ ಸಿಎಂ ಅಭ್ಯರ್ಥಿ: ರಾಗಾ ಘೋಷಣೆ

ಲೂಧಿಯಾನ: ರಾಹುಲ್‌ ಗಾಂಧಿ ಅವರು ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರನ್ನು ಪಂಜಾಬ್‌ನ ಕಾಂಗ್ರೆಸ್‌ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.

ಲೂಧಿಯಾನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ರಾಹುಲ್‌ ವಿಷಯ ತಿಳಿಸಿದರು.

ಈ ಮಹತ್ವದ ನಿರ್ಧಾರ ಪ್ರಕಟಿಸುತ್ತಲೇ, ಸಿಎಂ ಚನ್ನಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನವಜೋತ್‌ ಸಿಂಗ್‌ ಸಿಧು ಕೈ ಮೇಲೆತ್ತಿ ಒಗ್ಗಟ್ಟು ಪ್ರದರ್ಶಿಸಿದರು.

ಪಂಜಾಬ್‌ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವಂತೆ ಸಿಎಂ ಚನ್ನಿ ಆಗ್ರಹಿಸುತ್ತಲೇ ಬಂದಿದ್ದರು. ಶುದ್ಧಹಸ್ತರು ಮುಖ್ಯಮಂತ್ರಿ ಅಭ್ಯರ್ಥಿಯಾಗಲಿ ಎಂದು ಸಿಧು ಮಾರ್ಮಿಕವಾಗಿ ಹೇಳಿದ್ದರು. ಪಕ್ಷದ 60 ಶಾಸಕರು ಮುಖ್ಯಮಂತ್ರಿ ಯಾರಾಗಬೇಕು ಎಂದು ನಿರ್ಧರಿಸುತ್ತಾರೆ ಎಂದೂ ಸಿಧು ಹೇಳಿದ್ದರು.