Thursday, 12th December 2024

ಚಾರ್ ಧಾಮ್ ಯಾತ್ರೆ ರದ್ದು

ಡೆಹ್ರಾಡೂನ್: ಕರೋನಾ ವೈರಸ್ ಸೋಂಕು ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಉತ್ತರಾ ಖಂಡ ಸರ್ಕಾರ ಚಾರ್ ಧಾಮ್ ಯಾತ್ರೆಯನ್ನು ರದ್ದು ಗೊಳಿಸಿದೆ.

ಉತ್ತರಾಖಂಡ ಸರ್ಕಾರ ಪ್ರಕಟಣೆ ಹೊರಡಿಸಿದ್ದು, ‘ರಾಜ್ಯ ದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷದ ಚಾರ್ ಧಾಮ್ ಯಾತ್ರೆಯನ್ನು ರದ್ದುಪಡಿಸ ಲಾಗಿದೆ ಎಂದು ತಿಳಿಸಿದೆ.

ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ವರ್ಷದ ಚಾರ್ ಧಾಮ್ ಯಾತ್ರೆ ಸ್ಥಗಿತಗೊಳಿಸಲಾಗಿದೆ. ಆದರೆ ನಾಲ್ಕು ದೇವಾಲಯಗಳ ಅರ್ಚಕರು ಪೂಜೆ ನೆರವೇರಿಸಲಿದ್ದಾರೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ತಿರಥ್ ಸಿಂಗ್ ರಾವತ್ ಹೇಳಿದ್ದಾರೆ.

ಕೋವಿಡ್ ಸಾಂಕ್ರಾಮಿಕದ ಹೊರತಾಗಿಯೂ ಉತ್ತರಾಖಂಡ ಸರ್ಕಾರ ಮಹಾ ಕುಂಭಮೇಳ ಆಯೋಜಿಸಿತ್ತು. ಇಲ್ಲಿ ಕೋವಿಡ್ ನಿರ್ಬಂಧನೆಗಳನ್ನು ಗಾಳಿಗೆ ತೂರಿದ್ದ ಪರಿಣಾಮ ಯಾತ್ರಾರ್ಥಿಗಳು ಸೋಂಕಿಗೆ ತುತ್ತಾಗಿ ದ್ದರು. ಇಬ್ಬರು ಸ್ವಾಮೀಜಿಗಳೂ ಕೂಡ ಮೃತಪಟ್ಟಿದ್ದರು.