ಛತ್ತರ್ಪುರ್: ಮಧ್ಯಪ್ರದೇಶದಲ್ಲಿ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ಯಾಕ್ಸಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಧ್ಯಪ್ರದೇಶದ ಛತ್ತರ್ಪುರ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಏಳು ಜನರು ಸಾವನ್ನಪ್ಪಿ, 6 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿ ದ್ದಾರೆ. ಕದರಿ ಬಳಿಯ ರಾಷ್ಟ್ರೀಯ ಹೆದ್ದಾರಿ 39 ರಲ್ಲಿ ಈ ಅಪಘಾತ ಸಂಭವಿಸಿದೆ. ಮೃತರಲ್ಲಿ ಮಕ್ಕಳೂ ಸೇರಿದ್ದಾರೆ ಮತ್ತು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.
ಅಪಘಾತಕ್ಕೀಡಾದ ಟ್ಯಾಕ್ಸಿಯನ್ನು ಉತ್ತರ ಪ್ರದೇಶ ಸಂಖ್ಯೆಯಲ್ಲಿ ನೋಂದಾಯಿಸಲಾಗಿದೆ. ಛತ್ತರ್ಪುರ ರೈಲ್ವೆ ನಿಲ್ದಾಣದಿಂದ ಬಾಗೇಶ್ವರ್ ಧಾಮ್ಗೆ ತೆರಳುತ್ತಿದ್ದಾಗ ಪಂಜಾಬ್ ಸಂಖ್ಯೆಯ ಟ್ರಕ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಮಾಹಿತಿ ಪಡೆದ ನಂತರ, ಪೊಲೀಸರು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯ ವನ್ನು ಪ್ರಾರಂಭಿಸಿದರು.
ಟ್ಯಾಕ್ಸಿ ತನ್ನ ಕುಳಿತುಕೊಳ್ಳುವ ಸಾಮರ್ಥ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ಪ್ರಯಾಣಿಕರೊಂದಿಗೆ ಪ್ರಯಾಣಿಸುತ್ತಿತ್ತು. ಮಂಗಳವಾರ ಮುಂಜಾನೆ 5 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಅಪಘಾತದ ಸ್ಥಳಕ್ಕೆ ತಲುಪಿದ ಹತ್ತಿರದ ಜನರು ಗಾಯಾಳುಗಳನ್ನು ಟ್ಯಾಕ್ಸಿಯಿಂದ ಹೊರತೆಗೆದು 108 ಆಂಬ್ಯುಲೆನ್ಸ್ ಸೇವೆಯ ಸಹಾಯದಿಂದ ಛತ್ತರ್ಪುರದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು.