Tuesday, 17th December 2024

Cocaine Capsules: 14 ಕೋಟಿ ರೂ. ಮೌಲ್ಯದ ಕೊಕೇನ್ ಕ್ಯಾಪ್ಸುಲ್ ಸೇವಿಸಿದ್ದ ಕೀನ್ಯಾ ಮಹಿಳೆ; ಚೆನ್ನೈ ವಿಮಾನ ನಿಲ್ದಾಣದಲ್ಲಿ ಬಂಧನ

Chennai Airport

ಚೆನ್ನೈ: ಕೀನ್ಯಾದ ಮಹಿಳೆಯೊಬ್ಬಳು (Kenya Woman) 14.2 ಕೋಟಿ ರೂ. ಮೌಲ್ಯದ ಕೊಕೇನ್ (Cocaine Capsules) ಹೊಂದಿರುವ 90 ಕ್ಯಾಪ್ಸುಲ್‌ಗಳನ್ನು ಸೇವಿದ್ದು, ಕಸ್ಟಮ್ಸ್ ಅಧಿಕಾರಿಗಳು (Customs department) ಚೆನ್ನೈ ವಿಮಾನ ನಿಲ್ದಾಣದಲ್ಲಿ (Chennai Airport) ಬಂಧಿಸಿದ್ದಾರೆ. ಮಹಿಳೆ ಇಥಿಯೋಪಿಯಾದ ರಾಜಧಾನಿ ಅಡಿಸ್ ಅಬಾಬಾದಿಂದ ಚೆನ್ನೈಗೆ ಪ್ರಯಾಣಿಸಿದ್ದಳು ಎಂದು ಮಂಗಳವಾರ ಅಧಿಕಾರಿಗಳು ತಿಳಿಸಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಡಿಸೆಂಬರ್ 7ರಂದು ಇಥಿಯೋಪಿಯನ್ ಏರ್‌ಲೈನ್ಸ್‌ನಿಂದ ಅಡಿಸ್ ಅಬಾಬಾದಿಂದ ಚೆನ್ನೈಗೆ ಆಗಮಿಸಿದ ಕೀನ್ಯಾದ ಮಹಿಳಾ ಪ್ರಯಾಣಿಕನನ್ನು ಏರ್ ಇಂಟೆಲಿಜೆನ್ಸ್ ಯುನಿಟ್ ತಡೆಹಿಡಿದಿದೆ. ನಂತರ ವೈದ್ಯಕೀಯ ನೆರವಿನೊಂದಿಗೆ 90 ಸಿಲಿಂಡರಾಕಾರದ ಹೈಪರ್ಡೆನ್ಸ್ ವಸ್ತುಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ ಎಂದು ಕಸ್ಟಮ್ಸ್ ಇಲಾಖೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಕೊಕೇನ್‌ಗೆ ಧನಾತ್ಮಕ ಪರೀಕ್ಷೆ ನಡೆಸಿದಾಗ, ಸೈಕೋಟ್ರೋಪಿಕ್ ವಸ್ತು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಆಕೆಯ ಬಳಿ ಇದ್ದ ಒಟ್ಟು 1.4 ಕೆಜಿ ಕೊಕೇನ್ ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಚಿನ್ನ ಕಳ್ಳಸಾಗಣೆಯಲ್ಲಿ ಏರ್ ಇಂಡಿಯಾ ಸಿಬ್ಬಂದಿ ಬಂಧನ

ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರಿಗೆ 1.7 ಕೆಜಿ 24-ಕ್ಯಾರೆಟ್ ಚಿನ್ನವನ್ನು ಕಳ್ಳ ಸಾಗಣೆ ಮಾಡಲು ಸಹಾಯ ಮಾಡಿದ್ದಕ್ಕಾಗಿ ಏರ್ ಇಂಡಿಯಾದ ಕ್ಯಾಬಿನ್ ಸಿಬ್ಬಂದಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಭಾನುವಾರ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಚೆನ್ನೈಗೆ ಆಗಮಿಸಿದ ಕೂಡಲೇ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದಾರೆ. ನಂತರ ವಿಚಾರಣೆ ನಡೆಸಿದಾಗ ವಿಮಾನದೊಳಗೆ ಕ್ಯಾಬಿನ್ ಸಿಬ್ಬಂದಿಗೆ ಚಿನ್ನವನ್ನು ಹಸ್ತಾಂತರಿಸಿರುವುದನ್ನು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಕಸ್ಟಮ್ಸ್ ಇಲಾಖೆ ತಿಳಿಸಿದೆ.

ಆರೋಪಿಗಳನ್ನು ಶೋಧನೆಗೆ ಒಳಪಡಿಸಿದ ನಂತರ ಕ್ಯಾಬಿನ್ ಸಿಬ್ಬಂದಿಯ ಒಳ ಉಡುಪುಗಳಲ್ಲಿ ಬಚ್ಚಿಟ್ಟಿದ್ದ ಚಿನ್ನ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ : Drug Trafficking: ರಾಜ್ಯದಲ್ಲಿ ಡ್ರಗ್ಸ್‌ ಜಾಲದ ಬೇರು ಕತ್ತರಿಸಲು ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್