Friday, 13th December 2024

ಚೆನ್ನೈ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆತ

ಚೆನ್ನೈ: ದುಷ್ಕರ್ಮಿಗಳು ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ದ್ವಿಚಕ್ರ ವಾಹನಗಳಲ್ಲಿ ಬಂದು ಚೆನ್ನೈನಲ್ಲಿರುವ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದು ಪೊಲೀಸರ ದಾರಿ ತಪ್ಪಿಸಿ ಪರಾರಿ ಯಾಗಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಚೆನ್ನೈನ ನಂದನಂನಿಂದ ಓರ್ವನನ್ನು ಬಂಧಿಸಿದ್ದಾರೆ. ಆರೋಪಿಯನ್ನು ವಿನೋತ್ ಎಂದು ಗುರುತಿಸಲಾಗಿದ್ದು, ಆತನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ನಮ್ಮ ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಯಿತು. ಈ ಘಟನೆಗೆ ತಮಿಳುನಾಡು ಸರ್ಕಾರದ ನಡೆಯನ್ನು ನಾವು ಖಂಡಿಸುತ್ತೇವೆ. ನಾವು ಪೊಲೀಸರಿಗೂ ಮಾಹಿತಿ ನೀಡಿದ್ದೇವೆ, ಬಿಜೆಪಿ ಕಾರ್ಯಕರ್ತರು ಇಂತಹ ವಿಷಯಗಳಿಗೆ ಹೆದರುವುದಿಲ್ಲ ಎಂದು ಬಿಜೆಪಿ ಸದಸ್ಯ ಕರಾಟೆ ತ್ಯಾಗರಾಜನ್ ಹೇಳಿಕೆ ನೀಡಿದ್ದಾರೆ.