Sunday, 15th December 2024

ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ

ಚೆನ್ನೈ: ಕೊಟ್ಟೂರು​ಪುರಂ ಪ್ರದೇಶದ ಮದ್ರಾಸ್ ಐಐಟಿಯಲ್ಲಿ ಎರಡನೇ ವರ್ಷದ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದ ಮಹಾರಾಷ್ಟ್ರದ ಕೊಲ್ಹಾಪುರ ಮೂಲದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಚೌಗುಲೆ ಕೇದಾರ್ ಸುರೇಶ್(21) ಮೃತ ವಿದ್ಯಾರ್ಥಿ. ಐಐಟಿ ಕ್ಯಾಂಪಸ್​ನಲ್ಲಿನ ಕಾವೇರಿ ಹಾಸ್ಟೆಲ್​ನಲ್ಲಿ ತಾನು ವಾಸವಿದ್ದ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಆತನ ಜೊತೆಗಿದ್ದ ವಿದ್ಯಾರ್ಥಿಗಳು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಕೊಟ್ಟೂರು​ಪುರಂ ಪೊಲೀಸರು, ವಿದ್ಯಾರ್ಥಿಯ ಮೃತದೇಹ ವನ್ನು ರಾಯಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಕೊಟ್ಟೂರು​ಪುರಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರೇಮ ವೈಫಲ್ಯದಿಂದಾಗಿ ಕಳೆದ ಕೆಲ ದಿನ ಗಳಿಂದ ವಿದ್ಯಾರ್ಥಿ ಖಿನ್ನತೆಗೆ ಒಳಗಾಗಿದ್ದ ಎಂದು ತಿಳಿದುಬಂದಿದೆ.