Friday, 13th December 2024

ಕೌಲಾಲಂಪುರಕ್ಕೆ ತೆರಳುತ್ತಿದ್ದ ವಿಮಾನದ ಚಕ್ರ ಸ್ಪೋಟ

ಚೆನ್ನೈ: ಕೌಲಾಲಂಪುರಕ್ಕೆ ತೆರಳುತ್ತಿದ್ದ, 130 ಮಂದಿ ಪ್ರಯಾಣಿಕರಿದ್ದ ಅಂತರರಾಷ್ಟ್ರೀಯ ವಿಮಾನವೊಂದರ ಚಕ್ರ ಸ್ಪೋಟಗೊಂಡ ಘಟನೆ ಗುರುವಾರ ನಡೆದಿದೆ. ಅದೃಷ್ಠವಶಾತ್‌ ಯಾವುದೇ ದುರಂತ ಸಂಭವಿಸಿಲ್ಲ.

ಎಲ್ಲಾ ಪ್ರಯಾಣಿಕರನ್ನು ವಿಮಾನದಿದಿಂದ ಸುರಕ್ಷಿತವಾಗಿ ಇಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಲೇಷ್ಯಾದ ಕೌಲಾಲಂಪುರಕ್ಕೆ ತೆರಳಲು ಸಜ್ಜಾಗುತ್ತಿದ್ದ ವಿಮಾನದ ಹಿಂದಿನ ಟೈರ್‌ ಸ್ಫೋಟಗೊಂಡಿದೆ. ಕೂಡಲೇ ಪ್ರಯಾಣಿಕರನ್ನು ಇಳಿಸಿ, ನಗರದ ವಿವಿಧ ಹೋಟೆಲ್‌ಗಳಲ್ಲಿ ವಾಸ್ತವ್ಯ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಶುಕ್ರವಾರ ಬೆಳಿಗ್ಗೆ ಈ ವಿಮಾನ ಕಾರ್ಯಾಚರಣೆ ಪುನಾರಂಭಗೊಳಿಸುವ ಸಾಧ್ಯತೆ ಇದೆ. ಈ ಘಟನೆಯಿಂದಾಗಿ, ವಿಮಾನ ಕಾರ್ಯಾಚರನೆಗೆ ಏನೂ ಅಡಚಣೆಯುಂಟಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.