Friday, 13th December 2024

ರನ್‌ವೇಯಲ್ಲಿ ಚೇತಕ್ ಹೆಲಿಕಾಪ್ಟರ್‌ ಪತನ: ಸಿಬ್ಬಂದಿ ಸಾವು

ತಿರುವನಂತಪುರ: ಕೊಚ್ಚಿಯ ನೌಕಾ ವಾಯು ನಿಲ್ದಾಣದ ಐಎನ್‌ಎಸ್ ಗರುಡಾ ರನ್‌ವೇಯಲ್ಲಿ ಚೇತಕ್ ಹೆಲಿಕಾಪ್ಟರ್‌ ಪತನಗೊಂಡಿದ್ದು, ಘಟನೆಯಲ್ಲಿ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ.

ನೌಕಾ ವಾಯು ನಿಲ್ದಾಣದಲ್ಲಿ ನಿರ್ವಹಣಾ ಟ್ಯಾಕ್ಸಿ ತಪಾಸಣೆ ವೇಳೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ನೌಕಾಪಡೆಯ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೊಚ್ಚಿಯ ಐಎನ್‌ಎಸ್ ಗರುಡಾದಲ್ಲಿ ನಿರ್ವಹಣಾ ಟ್ಯಾಕ್ಸಿ ತಪಾಸಣೆಯ ವೇಳೆ ಚೇತಕ್ ಹೆಲಿಕಾಪ್ಟರ್ ಅಪಘಾತಕ್ಕೀಡಾಯಿತು. ಇದರ ಪರಿಣಾಮವಾಗಿ ಸಿಬ್ಬಂದಿಯೊಬ್ಬರು ದುರಾದೃಷ್ಟಕರವಾಗಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ನೌಕಾಪಡೆ ಎಕ್ಸ್‌ನಲ್ಲಿ ತಿಳಿಸಿದೆ.

ಅಪಘಾತದ ಕಾರಣವನ್ನು ತನಿಖೆ ಮಾಡಲು ತನಿಖಾ ಮಂಡಳಿಗೆ ಆದೇಶಿಸಲಾಗಿದೆ ಎಂದು ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ.

ನೌಕಾಪಡೆಯ ವಕ್ತಾರರು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಮತ್ತು ಎಲ್ಲಾ ನೌಕಾಪಡೆಯ ಸಿಬ್ಬಂದಿ, ಯೋಗೇಂದ್ರ ಸಿಂಗ್ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.