Monday, 16th September 2024

ಡಿ.13 ರಂದು ಛತ್ತೀಸ್ ಗಢದ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ

ವದೆಹಲಿ : ಡಿ.13 ರಂದು ಮಧ್ಯಾಹ್ನ ಛತ್ತೀಸ್ ಗಢದ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಅವರು ಪ್ರಭಾವಿ ಸಾಹು (ತೆಲಿ) ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಛತ್ತೀಸ್ಗಢದ ಭಾರತೀಯ ಜನತಾ ಪಕ್ಷ ಸರ್ಕಾರವು ಉಪಮುಖ್ಯಮಂತ್ರಿಯನ್ನ ನೇಮಿಸಬಹುದು ಎಂದು ಹಿರಿಯ ಮುಖಂಡ ರಮಣ್ ಸಿಂಗ್ ಹೇಳಿದ್ದಾರೆ.

ಇತ್ತೀಚೆಗೆ ನಡೆದ ಚುನಾವಣೆಯಲ್ಲಿ 90 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 54 ಸ್ಥಾನಗಳನ್ನು ಗೆದ್ದು, ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವನ್ನು ಪದಚ್ಯುತಗೊಳಿಸಿತು. 2018 ರಲ್ಲಿ 68 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 35 ಸ್ಥಾನಗಳಿಗೆ ಕುಸಿದಿದೆ.

ಪಕ್ಷದ ರಾಜ್ಯ ಪ್ರಧಾನ ಕಚೇರಿ ಕುಶಾಭೌ ಠಾಕ್ರೆ ಪರಿಷರ್ನಲ್ಲಿ ಹೊಸದಾಗಿ ಆಯ್ಕೆಯಾದ 54 ಶಾಸಕರ ಸಭೆಯಲ್ಲಿ ಸಾಯಿ ಅವರನ್ನು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಭಾನುವಾರ ಆಯ್ಕೆ ಮಾಡಲಾಯಿತು.

Leave a Reply

Your email address will not be published. Required fields are marked *