ರಾಯಪುರ: ಛತ್ತೀಸ್‌ಗಢದ(Chhattisgarh) 19 ವರ್ಷದ ಸೋಶಿಯಲ್ ಮೀಡಿಯಾ ಪ್ರಭಾವಿ (Social Media Influencer) ಯುವತಿಯೊಬ್ಬಳು ಇನ್‌ಸ್ಟಾಗ್ರಾಮ್‌ನಲ್ಲಿ ಲೈವ್-ಸ್ಟ್ರೀಮ್ ಮಾಡುವಾಗಲೇ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಸುದ್ದಿಯೊಂದು ವರದಿಯಾಗಿದೆ. ಜಂಜಗಿರ್ ಚಂಪಾ ಜಿಲ್ಲೆಯಲ್ಲಿ ಗುರುವಾರ (ಜ. 2) ಈ ಘಟನೆ ನಡೆದಿದೆ. ಯುವತಿ ಆತ್ಮಹತ್ಯೆಗೆ ಪ್ರಯತ್ನಿಸುವಾಗ ಲೈವ್ ವಿಡಿಯೊವನ್ನು ಆಕೆಯ ಫಾಲೊವರ್ಸ್ ಗಳು ವೀಕ್ಷಿಸಿದ್ದಾರೆ. ಫಾಲೊವರ್ಸ್‌ಗಳು ಆತಂಕದಿಂದ ಕಾಮೆಂಟ್ ಮಾಡಿದ್ದು, ಆತ್ಮಹತ್ಯೆಯಿಂದ ಯುವತಿಯನ್ನು ಉಳಿಸಲು ಸಾಧ್ಯವಾಗಿಲ್ಲ (Self Harming).
ಸೋಶಿಯಲ್ ಮೀಡಿಯಾ ಇನ್‌ಫ್ಲ್ಯುಯೆನ್ಸರ್ ಆಗಿದ್ದ ಯುವತಿ ಪ್ರೇಮ ವೈಫಲ್ಯದಿಂದ ಆಘಾತಕ್ಕೊಳಗಾಗಿದ್ದಳು ಎಂದು ಹೇಳಲಾಗಿದೆ. ಆ ಕಾರಣದಿಂದಲೇ ಅವಳು ಆ ರೀತಿಯ ಕಠಿಣ ನಿರ್ಧಾರ ಕೈಗೊಂಡಿರಬಹುದು ಎನ್ನಲಾಗಿದೆ. ಹೈದರಾಬಾದ್‌ನಲ್ಲಿ ಕೆಲಸ ಮಾಡುತ್ತಿರುವ ಆಕೆಯ ಪೋಷಕರು ಆತಂಕಗೊಂಡಿದ್ದು, ಹೆಚ್ಚಿನ ವಿವರಗಳು ಲಭ್ಯವಿಲ್ಲ.
ಲೈವ್ ಸ್ಟ್ರೀಮ್ ಸಮಯದಲ್ಲಿ, ಆಕೆಯ ಕೆಲವು ಫಾಲೊವರ್ಸ್‌ಗಳು ಆತ್ಮಹತ್ಯೆಯನ್ನು ತಡೆಯಲು ಪ್ರಯತ್ನಿಸಿದ್ದು, ಕೆಲವು ಸ್ಥಳೀಯರು ರಾಯ್‌ಪುರದಿಂದ 150 ಕಿ.ಮೀ. ದೂರದಲ್ಲಿರುವ ನವಾಗರ್ ಪಟ್ಟಣದಲ್ಲಿರುವ ಆಕೆಯ ಮನೆಗೆ ಧಾವಿಸಿದ್ದಾರೆ. ಆದರೆ ಮನೆಗೆ ಒಳಗಿನಿಂದ ಲಾಕ್ ಹಾಕಿರುವುದು ಕಂಡು ಬಂದಿದೆ. ನೆರೆಹೊರೆಯವರು ಒಳನುಗ್ಗಿ ಆಕೆಯ ಕೋಣೆಯನ್ನು ತಲುಪುವಷ್ಟರಲ್ಲಿ ತಡವಾಗಿತ್ತು. ಸಮೀಪದ ಆಸ್ಪತ್ರೆಯಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ.
ಯುವತಿ ಸೋಶಿಯಲ್ ಮೀಡಿಯಾದಲ್ಲಿಯೇ ಆಳವಾಗಿ ಮುಳುಗಿಹೋಗಿದ್ದಳು. ಆಗಾಗ್ಗೆ ರೀಲ್‌ಗಳು ಮತ್ತು ವಿಡಿಯೊಗಳನ್ನು ಪೋಸ್ಟ್ ಮಾಡುತ್ತಿದ್ದಳು ಎಂದು ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ. ಆಕೆಯ ಮಾನಸಿಕ ಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಮತ್ತು ಆತ್ಮಹತ್ಯೆಯ ಹಿಂದಿನ ಕಾರಣವನ್ನು ಪತ್ತೆ ಹಚ್ಚಲು ಪೊಲೀಸರು ಆಕೆಯ ಮೊಬೈಲ್ ಫೋನ್ ಅನ್ನು ಪರಿಶೀಲಿಸುತ್ತಿದ್ದಾರೆ.
ಲೈವ್ ವಿಡಿಯೊ ಮಾಡುತ್ತಾ ಮಹಿಳೆ ಆತ್ಮಹತ್ಯೆ
ಕಳೆದ ಕೆಲವು ತಿಂಗಳುಗಳ ಹಿಂದೆ ಪತಿ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಲೈವ್ ವಿಡಿಯೊ ಮಾಡಿಟ್ಟುಕೊಂಡು ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ (Women Suicide) ಘಟನೆ ಬೆಂಗಳೂರು ನಗರದ ಬ್ಯಾಡರಹಳ್ಳಿಯಲ್ಲಿ ನಡೆದಿತ್ತು. ಮಾನಸ (25) ಆತ್ಮಹತ್ಯೆ ಮಾಡಿಕೊಂಡು ಮಹಿಳೆ. ಮಾನಸ 6 ವರ್ಷದ ಹಿಂದೆ ದಿಲೀಪ್ ಎಂಬುವನ ಜತೆ ವಿವಾಹವಾಗಿದ್ದರು. ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗು ಇತ್ತು. ಆದರೆ ದಿಲೀಪ್ ಒಂದೂವರೆ ವರ್ಷದಿಂದ ಬೇರೊಂದು ಮಹಿಳೆ ಸಹವಾಸ ಮಾಡುತ್ತಿದ್ದ ಎನ್ನಲಾಗಿತ್ತು. ಇದೇ ವಿಚಾರಕ್ಕೆ ಪತಿ ಪತ್ನಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಬೇಸತ್ತ ಮಾನಸ ಆತ್ಮಹತ್ಯೆ ಮಾಡಿಕೊಂಡಿದ್ದರು.
ಮಾನಸ ಅಂದ್ರಹಳ್ಳಿ ಗಂಡನ ಮನೆಯಲ್ಲಿ ವಾಸವಿದ್ದರು. ಸಂಜೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ಬಳಿಕ ದಿಲೀಪ್ ಮನೆಯವರ ವಿರುದ್ಧ ಮಾನಸ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಪತಿ ಕಿರುಕುಳದಿಂದ ಆತ್ಮಹತ್ಯೆ ಎಂದು ಆರೋಪಿಸಿದ್ದರು. ಠಾಣೆ ಮುಂಭಾಗವೇ ಗಂಡನ ಕಡೆಯವರಿಗೆ ಹಲ್ಲೆ ನಡೆಸಲಾಗಿತ್ತು. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಸುದ್ದಿಯನ್ನೂ ಓದಿ:Kiccha Sudeep: ಸರಿಗಮಪ ವೇದಿಕೆಯಲ್ಲಿ ಸ್ಯಾಂಡಲ್‌ವುಡ್ ಬಾದ್ ಷಾ ಸುದೀಪ್; ಅಮ್ಮನ ಪ್ರತಿಮೆ ತಬ್ಬಿ ಕಿಚ್ಚ ಕಣ್ಣೀರು