ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನದಿಯಲ್ಲಿ ಸ್ನಾನ ಮಾಡಲು ಹೋಗಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ.
ಮೃತರನ್ನು ಪ್ರಿಯಾ (19), ಪ್ರಿಯದರ್ಶಿನಿ (13), ಕವಿಯಾ (11), ಸುಮತಾ (16), ಮೋನಿಕಾ (16), ಸಂಗವಿ (15) ಮತ್ತು ಮತ್ತೊಬ್ಬ ಮಹಿಳೆ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಗೆದಿಲಂ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ನದಿಯಲ್ಲಿ ಮುಳುಗಿ ಮೃತಪಟ್ಟಿ ದ್ದಾರೆ ಎಂದು ವರದಿಯಾಗಿದೆ.
ಘಟನೆ ಬಗ್ಗೆ ಪ್ರಧಾನಿ ಮೋದಿಯವರು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿ ದ್ದಾರೆ. ʻತಮಿಳುನಾಡಿನ ಕಡಲೂರಿನಲ್ಲಿ ಯುವಕರು ಮುಳುಗಿ ಸಾವನ್ನಪ್ಪಿದ ಘಟನೆ ತಿಳಿದು ನನಗೆ ಬೇಸರವಾಗಿದೆʼಎಂದು ಬರೆದುಕೊಂಡಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಂತಾಪ ವ್ಯಕ್ತಪಡಿಸಿದ್ದು, ಮುಖ್ಯ ಮಂತ್ರಿಗಳ ಸಾರ್ವಜನಿಕ ಪರಿಹಾರ ನಿಧಿಯಿಂದ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.