Sunday, 15th December 2024

ನದಿಯಲ್ಲಿ ಸ್ನಾನ: ಮೂವರು ಮಕ್ಕಳ ಸಾವು

ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನದಿಯಲ್ಲಿ ಸ್ನಾನ ಮಾಡಲು ಹೋಗಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ.

ಮೃತರನ್ನು ಪ್ರಿಯಾ (19), ಪ್ರಿಯದರ್ಶಿನಿ (13), ಕವಿಯಾ (11), ಸುಮತಾ (16), ಮೋನಿಕಾ (16), ಸಂಗವಿ (15) ಮತ್ತು ಮತ್ತೊಬ್ಬ ಮಹಿಳೆ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಗೆದಿಲಂ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ನದಿಯಲ್ಲಿ ಮುಳುಗಿ ಮೃತಪಟ್ಟಿ ದ್ದಾರೆ ಎಂದು ವರದಿಯಾಗಿದೆ.

 

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಂತಾಪ ವ್ಯಕ್ತಪಡಿಸಿದ್ದು, ಮುಖ್ಯ ಮಂತ್ರಿಗಳ ಸಾರ್ವಜನಿಕ ಪರಿಹಾರ ನಿಧಿಯಿಂದ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.