Sunday, 15th December 2024

ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ಸಿಐಡಿ ವಶಕ್ಕೆ

ಮುಂಬೈ: ಇಂಟೀರಿಯರ್‌ ಡಿಸೈನರ್‌ ಅನ್ವಯ್‌ ನಾಯಕ್‌ ಆತ್ಮಹತ್ಯೆಗೆ ಸಂಬಂಧಿಸಿದಂತೆ ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರನ್ನು ಮಹಾರಾಷ್ಟ್ರ ಸಿಐಡಿ ತಂಡವು ಬುಧವಾರ ವಶಕ್ಕೆ ಪಡೆದುಕೊಂಡಿದೆ.

ಮಹಾರಾಷ್ಟ್ರದ ಅಲಿಬಾಗ್‌ನ 53 ವರ್ಷದ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದಾ ನಾಯಕ್ 2018ರಲ್ಲಿ ಆತ್ಮ ಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆ ನಡೆದ ಸ್ಥಳದಲ್ಲಿ ಪೊಲೀಸರಿಗೆ ದೊರೆತಿದ್ದ ಪತ್ರದಲ್ಲಿ, ‘ತಮಗೆ ಪಾವತಿಸಬೇಕಿದ್ದ ₹5.40 ಗಳನ್ನು ಅರ್ನಬ್‌ ಗೋಸ್ವಾಮಿ ಪಾವತಿಸಿಲ್ಲ. ಆ ಕಾರಣ ನಮ್ಮ ಕುಟುಂಬ ತೀವ್ರ ಆರ್ಥಿಕ ತೊಂದರೆಗೆ ಒಳಗಾಯಿತು’ ಎಂದು ಅನ್ವಯ್‌ ಬರೆದುಕೊಂಡಿದ್ದರು.

ಘಟನೆಗೆ ಸಂಬಂಧಿಸಿದಂತೆ ಅಲಿಬಾಗ್‌ ಪೊಲೀಸರು 2018ರಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. 2020ರ ಮೇ ತಿಂಗಳಲ್ಲಿ ಮಹಾರಾಷ್ಟ್ರ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿತ್ತು.