Friday, 13th December 2024

ಮಸ್ಸೂರಿಯಲ್ಲಿ ತರಬೇತಿ ನಿರತ 33 ನಾಗರಿಕ ಸೇವಾ ಅಧಿಕಾರಿಗಳಿಗೆ ಸೋಂಕು ದೃಢ

ಡೆಹ್ರಾಡೂನ್: ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರು ಶಾಸ್ತ್ರೀ ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿನ ತರಬೇತಿ ನಿರತ 33 ನಾಗರಿಕ ಸೇವಾ ಅಧಿಕಾರಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ಅಕಾಡೆಮಿ, 428 ಅಧಿಕಾರಿಗಳು ಕ್ಯಾಂಪಸ್ ನಲ್ಲಿ ತರಬೇತಿ ಪಡೆಯುತ್ತಿದ್ದು, ಈ ಪೈಕಿ 33 ಅಧಿಕಾರಿಗಳಿಗೆ ಸೋಂಕು ದೃಢಪಟ್ಟಿದೆ. ಸರ್ಕಾರದ ಸೂಚನೆಯಂತೆ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದೆ.

ಸೂಕ್ತ ರಕ್ಷಣೆಯೊಂದಿಗೆ ತರಬೇತಿ ನಿರತ ಅಧಿಕಾರಿಗಳಿಗೆ ಆಹಾರ ಮತ್ತಿತರ ಅವಶ್ಯತೆಗಳನ್ನು ಪೂರೈಸಲಾಗುತ್ತಿದೆ ಎಂದು ಟ್ವೀಟ್ ನಲ್ಲಿ ಹೇಳಲಾಗಿದೆ. ನ.30ರವರೆಗೆ ಎಲ್ಲಾ ತರಗತಿಗಳೂ ಆನ್ ಲೈನ್ ನಲ್ಲಿ ನಡೆಯಲಿವೆ. ಇಡೀ ಆವರಣವನ್ನು ಸ್ಯಾನಿಟೈಸ್ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.