Friday, 22nd November 2024

ಜೋಧಪುರದಲ್ಲಿ ಕಲ್ಲು ತೂರಾಟ; ಶಾಂತಿ ಕಾಪಾಡಲು ಸಿಎಂ ಕರೆ

 

ಜೋಧಪುರ: ಜೋಧಪುರದ ಜಲೋರಿ ಗೇಟ್ ಪ್ರದೇಶದಲ್ಲಿ ಕೋಮು ಉದ್ವಿಗ್ನತೆ ಉಂಟಾಗಿದ್ದು, ಕಲ್ಲು ತೂರಾಟ ನಡೆದಿದೆ. ಕನಿಷ್ಠ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ.

ಈದ್‌ ಆಚರಣೆಗೆ ಕೆಲ ಗಂಟೆಗಳ ಮೊದಲು ಈ ಪರಿಸ್ಥಿತಿ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.

ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಜನರಿಗೆ ಮನವಿ ಮಾಡಿದ್ದಾರೆ.

ಕಲ್ಲು ತೂರಾಟದ ನಂತರ ಜೋಧ್‌ಪುರದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಈ ಘಟನೆ ದುರದೃಷ್ಟಕರ ಎಂದು ಹೇಳಿರುವ ಮುಖ್ಯಮಂತ್ರಿಗಳು, ಜನರು ಭ್ರಾತೃತ್ವವನ್ನು ಎತ್ತಿ ಹಿಡಿಯುವಂತೆ ಮನವಿ ಮಾಡಿದ್ದಾರೆ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಂತೆ ಪೊಲೀಸರಿಗೆ ಸೂಚನೆ ನೀಡಿರುವುದಾಗಿ ಗೆಹಲೋತ್ ಹೇಳಿದ್ದಾರೆ.