ಏಪ್ರಿಲ್‌ನಿಂದ ಜೂನ್‌ವರೆಗೆ ವಿಶೇಷವಾಗಿ ಮಧ್ಯ, ಪೂರ್ವ ಮತ್ತು ವಾಯುವ್ಯ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಶಾಖದ ವಾತಾವರಣ ಇರಲಿದೆ.
ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ, ಛತ್ತೀಸ್‌ಗಢ, ಮಹಾರಾಷ್ಟ್ರ, ಗುಜರಾತ್, ಪಂಜಾಬ್ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ಗಮನಾರ್ಹವಾಗಿ ತಾಪಮಾನ ಹೆಚ್ಚಾಗಿದೆ ಎಂದು ಹವಾ ಮಾನ ಇಲಾಖೆಯ ಡೈರೆಕ್ಟರ್ ಜನರಲ್ ತಿಳಿಸಿದ್ದಾರೆ.
2023 ರ ಏಪ್ರಿಲ್‌ನಿಂದ ಜೂನ್‌ವರೆಗೆ ದಕ್ಷಿಣ ಪರ್ಯಾಯದ್ವೀಪದ ಭಾರತ ಮತ್ತು ವಾಯುವ್ಯ ಭಾರತದ ಕೆಲವು ಭಾಗಗಳನ್ನು ಹೊರತುಪಡಿಸಿ ದೇಶದ ಬಹುತೇಕ ಭಾಗಗಳು ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸುವ ನಿರೀಕ್ಷೆಯಿದೆ ಎಂದೇಳಲಾಗಿದೆ.
ಜೊತೆಗೆ ದೇಶದಲ್ಲಿ ಏಪ್ರಿಲ್‌ನಲ್ಲಿ ಸಾಮಾನ್ಯ ಮಳೆಯಾಗುವ ನಿರೀಕ್ಷೆಯಿದೆ. ವಾಯುವ್ಯ, ಮಧ್ಯ ಮತ್ತು ಪರ್ಯಾಯದ್ವೀಪದ ಪ್ರದೇಶಗಳು ಸಾಮಾನ್ಯದಿಂದ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯನ್ನು ಪಡೆಯುವ ಸಾಧ್ಯತೆಯಿದೆ.