ಪಣಜಿ: ಗೋವಾ ರಾಜ್ಯದ ವಿವಿಧ ಸರ್ಕಾರಿ ಪ್ರೌಢಶಾಲೆಗಳು ಮತ್ತು ಪ್ರಾಥಮಿಕ ಶಾಲೆ ಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ಇಡಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪಣಜಿಯ ಹಳೆಯ ಸಚಿವಾಲಯದ ಮುಂದೆ ಸಾರ್ವಜನಿಕ ಧ್ವಜಾರೋಹಣ ನೆರವೇc ರಿಸಿದ ಮಾತನಾಡಿದರು.
ಗೋವಾ ರಾಜ್ಯದ ಗಣಿಗಾರಿಕೆ ಕುರಿತು ಮುಖ್ಯಮಂತ್ರಿ ಸಾವಂತ್ ಮಾತನಾಡಿ, 2018 ರಲ್ಲಿ ಸುಪ್ರೀಂ ಕೋರ್ಟ್‍ನಿಂದ ಗಣಿಗಳ ನವೀಕರಣ ರದ್ದುಗೊಳಿಸಿದ 88 ಗಣಿ ಲೀಸ್‍ಗಳನ್ನು ರಾಜ್ಯ ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಜ್ಜಾಗಿದೆ ಮತ್ತು ಇತರ ಗುತ್ತಿಗೆಗಳ ಇ-ಹರಾಜು ಪ್ರಕ್ರಿಯೆ ಪ್ರಾರಂಭಿಸಲು ಸಜ್ಜಾಗಿದೆ.
ಗೋವಾವನ್ನು ಭಾರತದ ಪ್ರವಾಸೋದ್ಯಮ ರಾಜಧಾನಿಯನ್ನಾಗಿ ಮಾಡುವ ಗುರಿಯನ್ನು ಸಾಧಿಸಲು ನಮ್ಮ ಸರ್ಕಾರವು ಕೆಲಸ ಮಾಡುತ್ತಿದೆ. ರಸ್ತೆ, ನೀರು ಮತ್ತು ವಿದ್ಯುತ್ ಸಂಪರ್ಕಕ್ಕಾಗಿ ತಮ್ಮ ಸರ್ಕಾರ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದೆ ಎಂದು ಸಾವಂತ್ ಮಾಹಿತಿ ನೀಡಿದರು.