Sunday, 15th December 2024

ದೆಹಲಿ ಸಿಎಂ ಆಗಸ್ಟ್ 1 ರಂದು ಗುಜರಾತ್‌ಗೆ ಭೇಟಿ

ನವದೆಹಲಿ: ದೆಹಲಿ, ಪಂಜಾಬ್ ಬಳಿಕ ಗುಜರಾತ್‌ ಮೇಲೆ ಕಣ್ಣಿಟ್ಟಿರುವ ಅಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆಗಸ್ಟ್ 1 ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ.

ಇತ್ತಿಚೆಗಷ್ಟೇ ಗುಜರಾತ್‌ನ ಸೂರತ್‌ನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತ ನಾಡಿದ್ದರು. ಈಗ ಆಗಸ್ಟ್ 1 ರಂದು ಸೋಮನಾಥ ದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅರವಿಂದ್ ಕೇಜ್ರಿವಾಲ್ ಮಾತನಾಡ ಲಿದ್ದಾರೆ.

 

ಡಿಸೆಂಬರ್‌ನಲ್ಲಿ ಗುಜರಾತ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಬಿಜೆಪಿ ಭದ್ರಕೋಟೆ ಗುಜರಾತ್‌ನಲ್ಲಿ ಅಧಿಕಾರ ಹಿಡಿಯಲು ಆಮ್ ಆದ್ಮಿ ಪಕ್ಷ ಕಸರತ್ತು ನಡೆಸುತ್ತಿದೆ. ದೆಹಲಿಯ ನಂತರ ಪಂಜಾಬ್‌ನಲ್ಲಿ ಅಧಿಕಾರ ಹಿಡಿದಿರುವುದು ಆಪ್‌ಗೆ ಮತ್ತಷ್ಟು ಬಲ ನೀಡಿದೆ.

ಗುಜರಾತ್‌ನಲ್ಲಿ ಆಪ್ ಅಧಿಕಾರಕ್ಕೆ ಬಂದರೆ ತಿಂಗಳಿಗೆ 300 ಯುನಿಟ್ ಉಚಿತ ವಿದ್ಯುತ್ ನೀಡುವುದಲ್ಲದೆ ದಿನದ 24 ಗಂಟೆಯೂ ವಿದ್ಯುತ್ ಪೂರೈಕೆ ಮಾಡುವುದಾಗಿ ಕೇಜ್ರಿವಾಲ್ ಘೋಷಿಸಿದ್ದಾರೆ.

ಆಗಸ್ಟ್ ತಿಂಗಳ ಒಂದನೇ ತಾರೀಖಿನಂದು ಸೋಮನಾಥಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಆಗಸ್ಟ್ 6, 7 ಮತ್ತು 10 ರಂದು ಕೂಡ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ.

ಜುಲೈ ತಿಂಗಳಲ್ಲಿ ಎರಡು ಬಾರಿ ಗುಜರಾತ್‌ಗೆ ಭೇಟಿ ನೀಡಿರುವ ಕೇಜ್ರಿವಾಲ್, ಉಚಿತ ವಿದ್ಯುತ್ ನೀಡುವುದು ಮಾತ್ರವಲ್ಲದೆ, ಡಿಸೆಂಬರ್ 31, 2021 ರ ಮೊದಲು ಎಲ್ಲಾ ಬಾಕಿ ಇರುವ ವಿದ್ಯುತ್ ಬಿಲ್‌ಗಳನ್ನು ರದ್ದುಗೊಳಿಸಲಾಗುವುದು ಎಂದು ಘೋಷಿಸಿ ದ್ದಾರೆ. ನಾವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಚುನಾವಣೆ ವೇಳೆ ನೀಡಿದ ಎಲ್ಲಾ ಭರವಸೆ ಗಳನ್ನು ಈಡೇರಿಸುತ್ತೇವೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಡಿಸೆಂಬರ್‌ನಲ್ಲಿ ನಡೆಯಲಿರುವ ಗುಜರಾತ್ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಉಚಿತ ವಿದ್ಯುತ್ ಪ್ರಮುಖ ಚುನಾವಣಾ ವಿಷಯ ವಾಗುವ ಸಾಧ್ಯತೆ ಇದೆ.