Thursday, 12th December 2024

ರೋಹ್ಟಕ್‌’ನಲ್ಲಿ ಪ್ರತಿಭಟನೆ ಎದುರಿಸಿದ ಸಿಎಂ ಖಟ್ಟರ್‌

ಚಂಡೀಗಡ: ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದ ರೈತರ ಮೇಲೆ ರೋಹ್ಟಕ್‌ನಲ್ಲಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.

ಘಟನೆಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಹಾಗೂ ರೈತರೂ ಗಾಯಗೊಂಡಿದ್ದಾರೆ ಎಂದು ಪ್ರತಿಭಟನಾನಿರತರು ಹೇಳಿಕೊಂಡಿ ದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಹೆಲಿಕಾಪ್ಟರ್ ಲ್ಯಾಂಡಿಂಗ್‌ ಸ್ಥಳವನ್ನು ಬದಲಾಯಿಸ ಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೋಹ್ಟಕ್‌ ಸಂಸದ ಅರವಿಂದ್ ಶರ್ಮಾ ತಂದೆಯ ಗೌರವಾರ್ಥ ಏರ್ಪಡಿಸಲಾಗಿದ್ದ ಸಂತಾಪ ಸೂಚಕ ಸಭೆಯಲ್ಲಿ ಮುಖ್ಯಮಂತ್ರಿಗಳು ಪಾಲ್ಗೊಳ್ಳಬೇಕಿತ್ತು. ಮುಖ್ಯಮಂತ್ರಿಗಳು ಬರುವ ಕಾರಣ ಬಿಗಿಬಂದೋಬಸ್ತ್ ಕಲ್ಪಿಸಲಾಗಿತ್ತು. ಬ್ಯಾರಿಕೇಡ್ ‌ಗಳನ್ನು ಹಾಕಿ ಮುನ್ನೆಚ್ಚರಿಕೆ ವಹಿಸಲಾಗಿತ್ತು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily