Thursday, 12th December 2024

ಸಿಎನ್‌ಜಿ ಬೆಲೆಯಲ್ಲಿ ಏರಿಕೆ: ಏ.18 ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನವದೆಹಲಿ: ಸಿಎನ್‌ಜಿ ಬೆಲೆಯಲ್ಲಿ ಏರಿಕೆಯಾಗಿದ್ದು, ಸರ್ಕಾರ ಇಂಧನಕ್ಕೆ ಸಬ್ಸಿಡಿ ನೀಡದಿದ್ದರೆ/ ಪ್ರಯಾಣ ದರ ಹೆಚ್ಚಿಸದಿದ್ದರೆ ಏ.18 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ನಗರದ ಆಟೋ, ಕ್ಯಾಬ್ ಮತ್ತು ಟ್ಯಾಕ್ಸಿ ಚಾಲಕರು ಎಚ್ಚರಿಕೆ ನೀಡಿದ್ದಾರೆ.

ಚಾಲಕರ ಸಂಘಗಳು ಶುಕ್ರವಾರ ಜಂತರ್ ಮಂತರ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮತ್ತು ಏ.11 ರಂದು ದೆಹಲಿ ಸೆಕ್ರೆಟರಿಯೇಟ್‌ನಲ್ಲಿ ಸಿಎನ್‌ಜಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಲಿವೆ.

ಸಿಎನ್‌ಜಿ ಬೆಲೆ ಕಡಿಮೆ ಮಾಡಬೇಕು ಅಥವಾ ಪ್ರಯಾಣ ದರ ಹೆಚ್ಚಿಸಬೇಕು. ಇಲ್ಲದಿದ್ದರೆ ತಮ್ಮ ಸಂಘ ‘ಅನಿರ್ದಿಷ್ಟಾವಧಿ ಮುಷ್ಕರ’ ನಡೆಸಲಿದೆ ಎಂದು ದೆಹಲಿ-ಎನ್‌ಸಿಆರ್‌ನಲ್ಲಿ ಸುಮಾರು 4 ಲಕ್ಷ ಚಾಲಕರು ಸದಸ್ಯರಾಗಿದ್ದಾರೆ. ಒಂದು ವೇಳೆ ಬೆಲೆ ಕಡಿತಗೊಳಿಸಲು ಸಾಧ್ಯವಾಗದಿದ್ದರೆ ಬೆಲೆ ಏರಿಕೆಯನ್ನು ನಿಭಾಯಿಸಲು ಪ್ರಯಾಣ ದರ ಹೆಚ್ಚಿಸಬೇಕು’ ಎಂದು ಒತ್ತಾಯಿಸಿದ್ದಾರೆ.