Sunday, 8th September 2024

ಇಬ್ಬರು ಸಿಎಂ, ಮೂವರು ಡಿಸಿಎಂ : ಅಸಾದುದ್ದೀನ್ ಓವೈಸಿ

ಲಖನೌ: ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಬಾಬು ಸಿಂಗ್ ಕುಶ್ವಾಹಾ ಮತ್ತು ಭಾರತ್ ಮುಕ್ತಿ ಮೋರ್ಚಾದೊಂದಿಗೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ಹೆದುಲ್ ಮುಸ್ಲಿಮೀನ್ ಮೈತ್ರಿ ಮಾಡಿಕೊಂಡಿರುವುದಾಗಿ ಶನಿವಾರ ಘೋಷಿಸಿದ್ದಾರೆ.

ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಒಬಿಸಿ ಸಮುದಾಯ ಮತ್ತು ದಲಿತ ಸಮುದಾಯದವರು ಮುಖ್ಯಮಂತ್ರಿ ಗಳಾಗುತ್ತಾರೆ. ಮುಸ್ಲಿಂ ಸಮುದಾಯ ಸೇರಿದಂತೆ ಮೂವರು ಉಪಮುಖ್ಯಮಂತ್ರಿಗಳು ಇರುತ್ತಾರೆ ಎಂದು ಓವೈಸಿ ತಿಳಿಸಿದ್ದಾರೆ.

ಮೈತ್ರಿ ಪ್ರಶ್ನೆಗೆ ಉತ್ತರಿಸಿದ ಬಾಬು ಸಿಂಗ್ ಕುಶ್ವಾಹಾ ಅವರು, ಇದು ಬಲವಂತದ ಮೈತ್ರಿ ಅಲ್ಲ. ನಾವು ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯ ಕ್ಕಾಗಿ ದೀರ್ಘಕಾಲ ಕೆಲಸ ಮಾಡಿದ್ದೇವೆ ಎಂದು ಹೇಳಿದರು.

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

error: Content is protected !!